ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Lava Virat V1 Pro 5G ಮೊಬೈಲ್‌! 6,000mAh ಬ್ಯಾಟರಿ ಹೈಲೈಟ್‌

HIGHLIGHTS

ಲಾವಾದ ಈ ಫೋನ್‌ 6,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ಲಾವಾ ವಿರಾಟ್ V1 ಪ್ರೊ ಸ್ಮಾರ್ಟ್‌ಫೋನ್‌ 50MP ಕ್ಯಾಮೆರಾ ಒಳಗೊಂಡಿದೆ

ಲಾವಾ ವಿರಾಟ್ V1 ಪ್ರೊ ಮೊಬೈಲ್‌ ಸಿಕ್ಕಿಂ ಮಿಡ್‌ನೈಟ್ ಮತ್ತು ಸ್ಪಿಟಿ ಫ್ರಾಸ್ಟ್ ಕಲರ್‌ನಲ್ಲಿ ಲಭ್ಯ

ಲಾವಾ ಮೊಬೈಲ್‌ ಕಂಪನಿಯ ಬಹುನಿರೀಕ್ಷಿತ Lava Virat V1 Pro 5G ಸ್ಮಾರ್ಟ್‌ಫೋನ್‌ ಇಂದು (ಆಗಷ್ಟ್‌ 24 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್‌ ಆಕ್ಟಾ-ಕೋರ್ ಯುನಿಸಾಕ್ T8200 ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 8MP ಸೆಲ್ಫಿ ಕ್ಯಾಮೆರಾ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಸಿಕ್ಕಿಂ ಮಿಡ್‌ನೈಟ್ ಮತ್ತು ಸ್ಪಿಟಿ ಫ್ರಾಸ್ಟ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಲಾವಾ ವಿರಾಟ್ V1 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Realme P4 Lite 5G ಮೊಬೈಲ್‌ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!

Lava Virat V1 Pro 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಲಾವಾ ಕಂಪನಿಯ ಲಾವಾ ವಿರಾಟ್ V1 ಪ್ರೊ 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ 15,999 ರೂ.ಗಳ ಬೆಲೆಯನ್ನು ಹೊಂದಿದೆ. ಆದರೆ ಆರಂಭಿಕ ಕೊಡುಗೆಯಾಗಿ ಕಂಪನಿಯು 2,000 ರೂ.ಗಳ ವರೆಗೆ ಬ್ಯಾಂಕ್ ರಿಯಾಯಿತಿಯನ್ನು ತಿಳಿಸಿಸದಸು, ಹೀಗಾಗಿ ಈ ಫೋನ್‌ ಬೆಲೆ 13,999 ರೂ.ಗಳು ಆಗಿದೆ. ಈ ಫೋನ್‌ ಸಿಕ್ಕಿಂ ಮಿಡ್‌ನೈಟ್ ಮತ್ತು ಸ್ಪಿಟಿ ಫ್ರಾಸ್ಟ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಇದೇ ಆಗಸ್ಟ್ 31 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗಲಿದೆ.

Lava Virat V1 Pro 5G

ಲಾವಾ ವಿರಾಟ್ V1 ಪ್ರೊ 5G ಮೊಬೈಲ್‌ ಫೀಚರ್ಸ್‌

ಲಾವಾ ವಿರಾಟ್ V1 ಪ್ರೊ 5G ಮೊಬೈಲ್‌ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 720 x 1,600 ಪಿಕ್ಸಲ್ ರೆಸಲ್ಯೂಶನ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಯುನಿಸಾಕ್ T8200 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ 6GB RAM + 128GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್‌ IP64 ರೇಟಿಂಗ್‌ ಹೊಂದಿದೆ.

ಹಾಗೆಯೇ ಲಾವಾ ವಿರಾಟ್ V1 ಪ್ರೊ 5G ಮೊಬೈಲ್‌ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು AI ಸೆನ್ಸಾರ್‌ ಬಲವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್‌ ಹೊಂದಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.4, USB ಟೈಪ್-C ಪೋರ್ಟ್ ಮತ್ತು ಸಂಪರ್ಕಕ್ಕಾಗಿ GPS ಅನ್ನು ಬೆಂಬಲಿಸುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :