Lava Virat V1 Pro 5G
ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಲಾವಾ ಕಂಪನಿಯ Lava Virat V1 Pro 5G ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಲಾವಾ ವಿರಾಟ್ V1 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಟ್ರಿಪಲ್ ಕ್ಯಾಮೆರಾ ರಚನೆ ಇರುವ Vivo V70 ಖರೀದಿಸಲು ಇದುವೇ ಅತ್ಯುತ್ತಮ ಸಮಯ!
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಲಾವಾ ವಿರಾಟ್ V1 ಪ್ರೊ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 21,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 14,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸಿಕ್ಕಿಂ ಮಿಡ್‌ನೈಟ್ ಮತ್ತು ಸ್ಪಿಟಿ ಫ್ರಾಸ್ಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಲಾವಾ ವಿರಾಟ್ V1 ಪ್ರೊ 5G ಮೊಬೈಲ್ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 720 x 1,600 ಪಿಕ್ಸಲ್ ರೆಸಲ್ಯೂಶನ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 6GB RAM + 128GB ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್ IP64 ರೇಟಿಂಗ್ ಹೊಂದಿದೆ.
ಹಾಗೆಯೇ ಲಾವಾ ವಿರಾಟ್ V1 ಪ್ರೊ 5G ಮೊಬೈಲ್ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು AI ಸೆನ್ಸಾರ್ ಬಲವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್ ಹೊಂದಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.4, USB ಟೈಪ್-C ಪೋರ್ಟ್ ಮತ್ತು ಸಂಪರ್ಕಕ್ಕಾಗಿ GPS ಅನ್ನು ಬೆಂಬಲಿಸುತ್ತದೆ.