ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ Mivi One 5G ಸ್ಮಾರ್ಟ್‌ಫೋನ್; ಬಜೆಟ್ ಬೆಲೆ ನಿರೀಕ್ಷೆ
ಇಂದು (ಸೆಪ್ಟೆಂಬರ್ 24 ರಂದು) ಮಿವಿ ಒನ್ 5G ಲಾಂಚ್
ಮಿವಿ ಒನ್ 5G ಫೋನ್ ಡ್ಯುಯಲ್ ಕ್ಯಾಮೆರಾ ಪಡೆದಿರಲಿದೆ
ಮಿವಿ ಒನ್ 5G ಫೋನ್ 6,000mAh ಬ್ಯಾಟರಿ ಹೊಂದಿರಲಿದೆ
ಮಿವಿ ಕಂಪನಿಯು ಇದೀಗ ನೂತನವಾಗಿ Mivi One 5G ಮೊಬೈಲ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೊಬೈಲ್ ಇಂದು (ಸಪ್ಟಂಬರ್ 24 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈ ಮೊಬೈಲ್ ಬಿಡುಗಡೆ ಕುರಿತು ಈಗಾಗಲೇ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 4 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೆ ಮಿವಿ ಒನ್ 5G ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Samsung Galaxy A17 5G ಬೆಲೆಯಲ್ಲಿ ಈಗ ಜಬರ್ದಸ್ತ್ ಡಿಸ್ಕೌಂಟ್; ಆಫರ್ ಮಾಹಿತಿ ಇಲ್ಲಿದೆ
ಇಂದು Mivi One 5G ಫೋನ್ ಲಾಂಚ್
ಮಿವಿ ಕಂಪನಿಯು ತನ್ನ ಹೊಸ ಮಿವಿ ಒನ್ 5G ಮೊಬೈಲ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಮೊಬೈಲ್ ಇಂದು (ಸಪ್ಟಂಬರ್ 24 ರಂದು) ಮಧ್ಯಾಹ್ನ 12 ಗಂಟೆಗೆ ಲಾಂಚ್ ಮಾಡಲಿದೆ. ಈ ಮೊಬೈಲ್ ಲಾಂಚ್ ಬಳಿಕ ಫ್ಲಿಪ್‌ಕಾರ್ಟ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ಬರ್ಗಂಡಿ, ಬ್ಲೂ ಮತ್ತು ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಫೋನ್ 15,000 ರೂ.ಗಳ ಆಸುಪಾಸಿನಲ್ಲಿ ಲಗ್ಗೆ ಇಡುವ ಸಾಧ್ಯತೆಗಳು ಇವೆ.

ಮಿವಿ ಒನ್ 5G ಫೋನಿನ ನಿರೀಕ್ಷಿತ ಫೀಚರ್ಸ್
ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಡಲಿರುವ ಮಿವಿ ಒನ್ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫ್ಲಾಟ್ ಡಿಸ್‌ಪ್ಲೇ ಡಿಸ್‌ಪ್ಲೇ ಹೊಂದಿರಲಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿರಲಿದೆ. ಹಾಗೆಯೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರ್ಯಾಗನ್ 5G ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿಯನ್ನು ಪಡೆದಿರಲಿದೆ. ಬ್ಯಾಟರಿ ದೀರ್ಘಾವಧಿ ಬ್ಯಾಕ್‌ಅಪ್ ಒದಗಿಸಲಿದೆ ಎನ್ನಲಾಗಿದೆ.
ಮಿವಿ ಒನ್ 5G ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿರಲಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸೌಲಭ್ಯದಲ್ಲಿ ಇರುವ ನಿರೀಕ್ಷೆಗಳು ಇವೆ. ಈ ಮೊಬೈಲ್ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇತ್ತೀಚಿನ ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
