32MP ಸೆಲ್ಫಿ ಕ್ಯಾಮೆರಾ ಜೊತೆಗೆ 7,000mAh ಬ್ಯಾಟರಿ ಇರುವ Moto G Max ಫೋನಿಗೆ ಬಿಗ್ ಡಿಸ್ಕೌಂಟ್!
ಫ್ಲಿಪ್ಕಾರ್ಟ್ನಲ್ಲಿ ಮೊಟೊ G ಮ್ಯಾಕ್ಸ್ ಮೊಬೈಲ್ಗೆ ಬೆಸ್ಟ್ ಆಫರ್
ಮೊಟೊ G ಮ್ಯಾಕ್ಸ್ ಮೊಬೈಲ್ 7,000mAh ಬ್ಯಾಟರಿ ಸೌಲಭ್ಯ ಪಡೆದಿದೆ
ಮೊಟೊ G ಮ್ಯಾಕ್ಸ್ ಸ್ಮಾರ್ಟ್ಫೋನ್ ಮೂರು ಆಕರ್ಷಕ ಕಲರ್ಗಳಲ್ಲಿ ಲಭ್ಯ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ Moto ಕಂಪನಿಯ Moto G Max ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಕ್ವಾಲ್ಕಮ್ Snapdragon 6s Gen 4 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಮೊಟೊ G ಮ್ಯಾಕ್ಸ್ ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Moto G Max ಮೊಬೈಲ್ ಬೆಲೆಯಲ್ಲಿ ಇಳಿಕೆ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊ G ಮ್ಯಾಕ್ಸ್ ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 44,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 21,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು Pantone Alaskan Blue, Pantone Malaga ಮತ್ತು Pantone Stargazer ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಮೊಟೊ G ಮ್ಯಾಕ್ಸ್ ಸ್ಮಾರ್ಟ್ಫೋನ್ ಫೀಚರ್ಸ್
ಮೊಟೊ G ಮ್ಯಾಕ್ಸ್ ಮೊಬೈಲ್ 6.72 ಇಂಚಿನ ಫುಲ್ HD+ LCD ಡಿಸ್ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,050 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಮ್ Snapdragon 6s Gen 4 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಹೊಂದಿದೆ.
ಹಾಗೆಯೇ ಮೊಟೊ G ಮ್ಯಾಕ್ಸ್ ಮೊಬೈಲ್ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYTIA 600 ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್ ಜೊತೆಗೆ 30W ಟರ್ಬೊಪವರ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.