Moto G Max
ಮೊಟೊರೊಲಾ ಸಂಸ್ಥೆಯ ಹೊಸ Moto G Max ಫೋನ್ ಮೀಡ್‌ರೇಂಜ್ ಬೆಲೆ ಹಾಗೂ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ಇಂದು (ಆಗಷ್ಟ್ 20 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್ ಕ್ವಾಲ್ಕಮ್ Snapdragon 6s Gen 4 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್ ಮೂರು ಆಕರ್ಷಕ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಮೊಟೊ G ಮ್ಯಾಕ್ಸ್ ಸ್ಮಾರ್ಟ್‌ಫೋನ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಹೊಸ Realme P4s ಮೊಬೈಲ್ ಬಿಡುಗಡೆಗೆ ದಿನಾಂಕ ಫಿಕ್ಸ್! 8,000mAh ಬ್ಯಾಟರಿ ಸೌಲಭ್ಯ
ಮೊಟೊರೊಲಾ ಕಂಪನಿಯ ಮೊಟೊ G ಮ್ಯಾಕ್ಸ್ ಮೊಬೈಲ್ ಇಂದು (ಆಗಷ್ಟ್ 20 ರಿಂದ) ಮಧ್ಯಾಹ್ನ 12 ಗಂಟೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ 27,999 ರೂಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ Pantone Alaskan Blue, Pantone Malaga ಮತ್ತು Pantone Stargazer ಆಗಿವೆ. ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮೂಲಕ ಮಾರಾಟಕ್ಕೆ ಬರಲಿದೆ.
ಮೊಟೊ G ಮ್ಯಾಕ್ಸ್ ಮೊಬೈಲ್ 6.72 ಇಂಚಿನ ಫುಲ್ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,050 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಮ್ Snapdragon 6s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಹೊಂದಿದೆ.
ಹಾಗೆಯೇ ಮೊಟೊ G ಮ್ಯಾಕ್ಸ್ ಮೊಬೈಲ್ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYTIA 600 ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್ ಜೊತೆಗೆ 30W ಟರ್ಬೊಪವರ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಒಂದೇ ಚಾರ್ಜ್‌ನಲ್ಲಿ 63 ಗಂಟೆಗಳ ಬ್ಯಾಟರಿ ಬಾಳಿಕೆಯನ್ನು ನೀಡಬಲ್ಲದು ಎಂದು ಕಂಪನಿ ಹೇಳಿಕೊಂಡಿದೆ.