Moto G Max ಮೊಬೈಲ್‌ನ ಫಸ್ಟ್‌ ಸೇಲ್‌ ನಾಳೆ ಪ್ರಾರಂಭ; ಜಬರ್ದಸ್ತ್‌ ಫೀಚರ್ಸ್‌

HIGHLIGHTS

ನಾಳೆ ಮೊಟೊ G ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಸೇಲ್‌ ಪ್ರಾರಂಭ

ಮೊಟೊ G ಮ್ಯಾಕ್ಸ್‌ ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿ ಪಡೆದಿದೆ

ಮೊಟೊ G ಮ್ಯಾಕ್ಸ್‌ ಈ ಮೊಬೈಲ್‌ ಮೂರು ಆಕರ್ಷಕ ಕಲರ್‌ ಆಯ್ಕೆಯಲ್ಲಿ ಲಭ್ಯ

Moto G Max ಮೊಬೈಲ್‌ನ ಫಸ್ಟ್‌ ಸೇಲ್‌ ನಾಳೆ ಪ್ರಾರಂಭ; ಜಬರ್ದಸ್ತ್‌ ಫೀಚರ್ಸ್‌

ಮೊಟೊರೊಲಾ ಕಂಪನಿಯ ಇತ್ತೀಚಿನ Moto G Max ಮೊಬೈಲ್‌ ಮೀಡ್‌ರೇಂಜ್‌ ಬೆಲೆ ಹಾಗೂ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಆಗಷ್ಟ್‌ 20 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ನೂತನ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ Snapdragon 6s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಜೊತೆಗೆ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್‌ 50MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್‌ ಮೂರು ಆಕರ್ಷಕ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಮೊಟೊ G ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ ಭಾರತದಲ್ಲಿ Vivo Y31T 5G ಎಂಟ್ರಿ ಕೊಡಲಿದೆ! 7,200mAh ಬ್ಯಾಟರಿ ಸಾಧ್ಯತೆ

Moto G Max ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಮೊಟೊರೊಲಾ ಕಂಪನಿಯ ಮೊಟೊ G ಮ್ಯಾಕ್ಸ್‌ ಮೊಬೈಲ್‌ ನಾಳೆ (ಆಗಷ್ಟ್‌ 20 ರಿಂದ) ಮಧ್ಯಾಹ್ನ 12 ಗಂಟೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ 27,999 ರೂಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ Pantone Alaskan Blue, Pantone Malaga ಮತ್ತು Pantone Stargazer ಆಗಿವೆ. ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟಕ್ಕೆ ಬರಲಿದೆ.

Moto G Max Launched in India With 7000mAh Battery Check Price Specs
Moto G Max

ಮೊಟೊ G ಮ್ಯಾಕ್ಸ್‌ ಮೊಬೈಲ್‌ ಫೀಚರ್ಸ್‌

ಮೊಟೊ G ಮ್ಯಾಕ್ಸ್‌ ಮೊಬೈಲ್‌ 6.72 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,050 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಕ್ವಾಲ್ಕಮ್‌ Snapdragon 6s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಹೊಂದಿದೆ.

ಹಾಗೆಯೇ ಮೊಟೊ G ಮ್ಯಾಕ್ಸ್‌ ಮೊಬೈಲ್‌ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYTIA 600 ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್‌ ಜೊತೆಗೆ 30W ಟರ್ಬೊಪವರ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಒಂದೇ ಚಾರ್ಜ್‌ನಲ್ಲಿ 63 ಗಂಟೆಗಳ ಬ್ಯಾಟರಿ ಬಾಳಿಕೆಯನ್ನು ನೀಡಬಲ್ಲದು ಎಂದು ಕಂಪನಿ ಹೇಳಿಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile