ದೇಶಿಯ ಮಾರುಕಟ್ಟೆಯಲ್ಲಿ Moto G Max ಮೊಬೈಲ್‌ ಲಾಂಚ್‌; 32MP ಸೆಲ್ಫಿ ಕ್ಯಾಮೆರಾ ಹೈಲೈಟ್‌

HIGHLIGHTS

ಮೊಟೊರೊಲಾದ ಈ ಹೊಸ ಫೋನ್‌ 7000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ಮೊಟೊ G ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 50MP ಸೋನಿ LYTIA 600 ಕ್ಯಾಮೆರಾ ಒಳಗೊಂಡಿದೆ

ಮೊಟೊ G ಮ್ಯಾಕ್ಸ್‌ ಮೊಬೈಲ್‌ 30W ಟರ್ಬೊಪವರ್ ಚಾರ್ಜಿಂಗ್‌ ಸಪೋರ್ಟ್‌ ಒಳಗೊಂಡಿದೆ

ಮೊಟೊರೊಲಾ ಕಂಪನಿಯ ಬಹುನಿರೀಕ್ಷಿತ Moto G Max ಮೊಬೈಲ್‌ ಇಂದು (ಆಗಷ್ಟ್‌ 14 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್‌ ಕ್ವಾಲ್ಕಮ್‌ Snapdragon 6s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 32MP ಸೆಲ್ಫಿ ಕ್ಯಾಮೆರಾ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು 50MP ಸೋನಿ LYTIA 600 ಸೆನ್ಸರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಮೊಟೊ G ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : POCO C85 5G ಮೊಬೈಲ್‌ ಅಮೆಜಾನ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್‌ನಲ್ಲಿ ಲಭ್ಯ!

Moto G Max ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಮೊಟೊರೊಲಾ ಕಂಪನಿಯ ಮೊಟೊ G ಮ್ಯಾಕ್ಸ್‌ ಮೊಬೈಲ್‌ ಸಿಂಗಲ್ ವೇರಿಯಂಟ್‌ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ 27,999 ರೂಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ Pantone Alaskan Blue, Pantone Malaga ಮತ್ತು Pantone Stargazer ಆಗಿವೆ. ಈ ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 6 ರಂದು) ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಸೀಮಿತ ಮಾರಾಟದ ಅವಧಿಗೆ ಲಭ್ಯವಿದೆ. ಈ ಫೋನ್‌ ಆಗಸ್ಟ್ 20 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟಕ್ಕೆ ಬರಲಿದೆ.

ಮೊಟೊ G ಮ್ಯಾಕ್ಸ್‌ ಮೊಬೈಲ್‌ ಫೀಚರ್ಸ್‌

ಮೊಟೊ G ಮ್ಯಾಕ್ಸ್‌ ಮೊಬೈಲ್‌6.72 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,050 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಕ್ವಾಲ್ಕಮ್‌ Snapdragon 6s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಹೊಂದಿದೆ.

ಹಾಗೆಯೇ ಮೊಟೊ G ಮ್ಯಾಕ್ಸ್‌ ಮೊಬೈಲ್‌ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYTIA 600 ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7000mAh ಬ್ಯಾಟರಿ ಸಪೋರ್ಟ್‌ ಜೊತೆಗೆ 30W ಟರ್ಬೊಪವರ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಒಂದೇ ಚಾರ್ಜ್‌ನಲ್ಲಿ 63 ಗಂಟೆಗಳ ಬ್ಯಾಟರಿ ಬಾಳಿಕೆಯನ್ನು ನೀಡಬಲ್ಲದು ಎಂದು ಕಂಪನಿ ಹೇಳಿಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :