ಅಗ್ಗದ ದರದ Moto g06 Power ಮೊಬೈಲ್ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ!
ಮೊಟೊ g06 ಪವರ್ ಈಗ ಭರ್ಜರಿ ಆಫರ್ ಬೆಲೆಯಲ್ಲಿ ಲಭ್ಯ
ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ
ಈ ಫೋನಿನ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಆಯ್ಕೆ ಹೊಂದಿದೆ
ಮೊಟೊರೊಲಾ ಕಂಪನಿಯ ಅಗ್ಗದ ದರದ ಮೊಟೊ g06 ಪವರ್ ಮೊಬೈಲ್ ಈಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G81 ಎಕ್ಸ್‌ಟ್ರೀಮ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಬ್ಲೂ, ಗ್ರೀನ್ ಹಾಗೂ ಗ್ರೇ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊ g06 ಪವರ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Redmi Note 15 SE ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ! ಈ ಆಫರ್ ಮಿಸ್ ಮಾಡ್ಕೋಬೇಡಿ
Moto g06 Power ಬೆಲೆಯಲ್ಲಿ ಸಖತ್ ಇಳಿಕೆ
ಅಗ್ಗದ ಬೆಲೆಯಲ್ಲಿ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಮೊಟೊ g06 ಪವರ್ ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 19,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 12,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಮೊಬೈಲ್ ಬ್ಲೂ, ಗ್ರೀನ್ ಹಾಗೂ ಗ್ರೇ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಮೊಟೊ g06 ಪವರ್ ಫೋನ್ ಫೀಚರ್ಸ್
ಮೊಟೊ g06 ಪವರ್ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಜೊತೆಗೆ 6.88 ಇಂಚಿನ ಡಿಸ್ಪ್ಲೇಯನ್ನು ಪಡೆದಿದೆ. ಅಲ್ಲದೇ ಇದು ಕಾರ್ನಿಂಗ್‌ನ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿರುವ ಜೊತೆಗೆ ಡಾಲ್ಬಿ ಅಟ್ಮಾಸ್ ಬೆಂಬಲಿತ ಸ್ಟೀರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಹೆಲಿಯೊ G81 ಎಕ್ಸ್‌ಟ್ರೀಮ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿದೆ. ಹಾಗೆಯೇ IP64 ರೇಟಿಂಗ್ ಸೌಲಭ್ಯ ಪಡೆದಿದೆ.
ಹಾಗೆಯೇ ಮೊಟೊ g06 ಪವರ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ರಚನೆ ಪಡೆದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಸಾಮರ್ಥ್ಯ ಇದ್ದು, ಮೂರು ದಿನಗಳ ಬ್ಯಾಕ್‌ಅಪ್ ಒದಗಿಸಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
