ಸದ್ದಿಲ್ಲದೆ ಭಾರತದಲ್ಲಿ Moto G37 ಸ್ಮಾರ್ಟ್‌ಫೋನ್‌ ಲಾಂಚ್‌! ಅಗ್ಗದ ಬೆಲೆಯಲ್ಲಿ ಲಭ್ಯ

HIGHLIGHTS

ಭಾರತದಲ್ಲಿ ಮೊಟೊ G37 ಇದೇ ಮೇ 25 ರಿಂದ ಖರೀದಿಗೆ ಲಭ್ಯ

ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಪ್ರೊಸೆಸರ್‌ ಹೊಂದಿದೆ

ಮೊಟೊದ ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ

ಮೊಟೊರೊಲಾ ಕಂಪನಿಯ ಬಹುನಿರೀಕ್ಷಿತ Moto G37 ಸ್ಮಾರ್ಟ್‌ಫೋನ್‌ ಇಂದು (ಮೇ 19 ರಂದು) ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6400 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಪಡೆದಿರುವುದು ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಪ್ಯಾಂಟೋನ್ ನಾಟಿಕಲ್ ಬ್ಲೂ, ಪ್ಯಾಂಟೋನ್ ಇಂಪೆನೆಟ್ರೇಬಲ್ ಮತ್ತು ಪ್ಯಾಂಟೋನ್ ಕ್ಯಾಪ್ರಿ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಮೊಟೊ G37 ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ವೇಗದ ಪ್ರೊಸೆಸರ್‌ ಇರುವ Motorola Edge 60 Fusion 5G ಬೆಲೆಯಲ್ಲಿ ಸಖತ್ ಇಳಿಕೆ!

Moto G37 ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಮೊಟೊರೊಲಾ ಕಂಪನಿಯ ಮೊಟೊ G37 ಮೊಬೈಲ್‌ ಸಿಂಗಲ್ ವೇರಿಯಂಟ್‌ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 4GB + 64GB ಸ್ಟೋರೇಜ್‌ ವೇರಿಯಂಟ್‌ 13,999 ರೂ.ಗಳ ಬೆಲೆಯನ್ನು ಹೊಂದಿದೆ. ಇದು ಪ್ಯಾಂಟೋನ್ ನಾಟಿಕಲ್ ಬ್ಲೂ, ಪ್ಯಾಂಟೋನ್ ಇಂಪೆನೆಟ್ರೇಬಲ್ ಮತ್ತು ಪ್ಯಾಂಟೋನ್ ಕ್ಯಾಪ್ರಿ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ ಇದೇ ಮೇ 25 ರಿಂದ ಫ್ಲಿಪ್‌ಕಾರ್ಟ್, ಮೊಟೊರೊಲಾ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತವೆ.

ಮೊಟೊ G37 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಮೊಟೊ G37 ಮೊಬೈಲ್‌ನ ಕವರ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್ 1604 x 720 ಪಿಕ್ಸೆಲ್‌ ರೆಸಲ್ಯೂಶನ್ ಒಳಗೊಂಡಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್‌ ಜೊತೆಗೆ 1050 nits ಬ್ರೈಟ್‌ನೆಸ್ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದುಕೊಂಡಿದೆ. ಇನ್ನು ಇದು ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ವಿಸ್ತರಿಸಬಹುದು.

ಹಾಗೆಯೇ ಮೊಟೊದ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಲೈಟ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, 20W ವೇಗದ ಚಾರ್ಜಿಂಗ್‌ ಬೆಂಬಲ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :