ಬಜೆಟ್‌ ದರದಲ್ಲಿ Moto G37 ಮೊಬೈಲ್‌ ಖರೀದಿಸುವ ಪ್ಲಾನ್‌ ಇದ್ರೆ, ಈ ಆಫರ್‌ ಗಮನಿಸಿ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊ G37 ಫೋನಿಗೆ ಬಿಗ್ ಆಫರ್‌

ಮೊಟೊ G37 ಮೊಬೈಲ್‌ 5,200mAh ಬ್ಯಾಟರಿ ಸೌಲಭ್ಯ ಪಡೆದಿದೆ

ಮೊಟೊ G37 ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Moto G37 ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 5,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊ G37 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Moto G37 ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ಮೀಡ್‌ರೇಂಜ್‌ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊ G37 ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 24,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 14,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಪ್ಯಾಂಟೋನ್ ನಾಟಿಕಲ್ ಬ್ಲೂ, ಪ್ಯಾಂಟೋನ್ ಇಂಪೆನೆಟ್ರೇಬಲ್ ಮತ್ತು ಪ್ಯಾಂಟೋನ್ ಕ್ಯಾಪ್ರಿ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Moto G37

ಮೊಟೊ G37 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಮೊಟೊ G37 ಮೊಬೈಲ್‌ನ ಕವರ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್ 1604 x 720 ಪಿಕ್ಸೆಲ್‌ ರೆಸಲ್ಯೂಶನ್ ಒಳಗೊಂಡಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್‌ ಜೊತೆಗೆ 1050 nits ಬ್ರೈಟ್‌ನೆಸ್ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದುಕೊಂಡಿದೆ. ಇನ್ನು ಇದು ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ವಿಸ್ತರಿಸಬಹುದು.

ಹಾಗೆಯೇ ಮೊಟೊದ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಲೈಟ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, 20W ವೇಗದ ಚಾರ್ಜಿಂಗ್‌ ಬೆಂಬಲ ಹೊಂದಿದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile