ಮೊಟೊರೊಲಾ ಕಂಪನಿಯ ಬಜೆಟ್ ದರದ ಮೊಬೈಲ್‌ಗಳ ಪೈಕಿ ಒಂದಾದ Moto G37 Power ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊ G37 ಪವರ್ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : iPhone 18 Pro ಬಿಡುಗಡೆಯ ಬೆನ್ನಲ್ಲೇ ಶಾಕ್ ಕೊಟ್ಟ ಆಪಲ್! ದಿಢೀರ್ iPhone 17 ಬೆಲೆ ಭಾರಿ ಏರಿಕೆ
ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಮೊಟೊ G37 ಪವರ್ ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 30,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 21,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್ ಪ್ಯಾಂಟೋನ್ ನಾಟಿಕಲ್ ಬ್ಲೂ, ಪ್ಯಾಂಟೋನ್ ಇಂಪೆನೆಟ್ರೇಬಲ್ ಮತ್ತು ಪ್ಯಾಂಟೋನ್ ಕ್ಯಾಪ್ರಿ ಕಲರ್ ಆಯ್ಕೆ ಹೊಂದಿದೆ.
ಮೊಟೊ G37 ಪವರ್ ಮೊಬೈಲ್ 6.7 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದ್ದು ಇದರ ಸ್ಕ್ರೀನ್ 1604 x 720 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಜೊತೆಗೆ 1050 nits ಬ್ರೈಟ್‌ನೆಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಒಳಗೊಂಡಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 8GB + 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ವಿಸ್ತರಿಸಬಹುದು.
ಮೊಟೊ G37 ಪವರ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 30W ಟರ್ಬೋಚಾರ್ಜಿಂಗ್ ಹಾಗೂ 6W ರಿವರ್ಸ್ ಚಾರ್ಜಿಂಗ್ ಬೆಂಬಲ ಹೊಂದಿದೆ.