Moto G37 ಮತ್ತು Moto G37 Power ಮೊಬೈಲ್‌ಗಳ ಲಾಂಚ್‌ಗೆ ದಿನಾಂಕ ಫಿಕ್ಸ್‌!

HIGHLIGHTS

ಮೊಟೊದ ಈ ಎರಡು ಮೊಬೈಲ್‌ಗಳು ಇದೇ ಮೇ 19 ರಂದು ಬಿಡುಗಡೆ ಆಗಲಿವೆ

ಮೊಟೊರೊಲಾದ ಈ ಫೋನ್‌ಗಳು 7,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿರಲಿವೆ

ಈ ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಪ್ರೊಸೆಸರ್‌ ಒಳಗೊಂಡಿರಲಿವೆ

Moto G37 ಮತ್ತು Moto G37 Power ಮೊಬೈಲ್‌ಗಳ ಲಾಂಚ್‌ಗೆ ದಿನಾಂಕ ಫಿಕ್ಸ್‌!

ಮೊಟೊರೊಲಾ ಕಂಪನಿಯ ಸದ್ದಿಲ್ಲದೆ ಇದೀಗ ಮೊಟೊ G37 ಸರಣಿಯನ್ನು ಭಾರತದಲ್ಲಿ ಪರಿಚಯಿಸಲು ಸಜ್ಜಾಗಿದೆ. ಈ ಸರಣಿಯು Moto G37 ಮತ್ತು Moto G37 Power ಹೆಸರಿನ ಎರಡು ಮಾಡೆಲ್‌ಗಳನ್ನು ಒಳಗೊಂಡಿರುವುದು ಖಚಿತವಾಗಿದೆ. ಈ ಮೊಬೈಲ್‌ಗಳ ಲಾಂಚ್ ಕುರಿತಾಗಿ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಅಂದಹಾಗೆ ಈ ಸರಣಿಯ ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಒಳಗೊಂಡಿರಲಿವೆ. ಇದರೊಂದಿಗೆ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿರಲಿವೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಸೆರಾಮಿಕ್ ರಕ್ಷಣೆ ಸಹ ಹೊಂದಿರಲಿವೆ. ಹಾಗಾದರೆ ಮುಂಬರುವ ಮೊಟೊ G37 ಹಾಗೂ ಮೊಟೊ G37 ಪವರ್‌ ಫೋನ್‌ಗಳ ಲಾಂಚ್ ಡೇಟ್, ನಿರೀಕ್ಷಿತ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vi ಟೆಲಿಕಾಂನ ಈ ಪ್ಲಾನಿನಲ್ಲಿ 180 ದಿನಗಳ ವ್ಯಾಲಿಡಿಟಿ ಜೊತೆಗೆ Unlimited ಡೇಟಾ! ಬೆಲೆ ಎಷ್ಟು?

Moto G37 ಸರಣಿಯ ಲಾಂಚ್‌ ದಿನಾಂಕ

ಮೊಟೊರೊಲಾ ಸಂಸ್ಥೆಯು ನೂತನವಾಗಿ ಮೊಟೊ G37 ಹಾಗೂ ಮೊಟೊ G37 ಪವರ್‌ ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ತಯಾರಾಗಿದೆ. ಈ ಎರಡು ಫೋನ್‌ಗಳನ್ನು ಇದೇ ಮೇ 19 ರಂದು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವುದು ಪಕ್ಕಾ ಆಗಿದೆ. ಈ ಕುರಿತು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಲೈವ್ ಆಗಿದೆ. ಇನ್ನು ಈ ಫೋನ್‌ಗಳು blue ಮತ್ತು turquoise green colour ಆಯ್ಕೆಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಫೋನ್‌ಗಳ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಕಂಪನಿಯು ಹೊರಹಾಕಿಲ್ಲ.

Moto G37

ಮೊಟೊ G37 ಮತ್ತು ಮೊಟೊ G37 ಪವರ್: ನಿರೀಕ್ಷಿತ ಫೀಚರ್ಸ್‌

ಮುಂಬರುವ ಹೊಸ ಮೊಟೊ G37 ಮತ್ತು ಮೊಟೊ G37 ಪವರ್ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿವೆ ಎನ್ನಲಾಗಿದೆ. ಅಲ್ಲದೇ ಈ ಮೊಬೈಲ್‌ಗಳು 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರುತ್ತದೆ ಎಂದು ಮೊಟೊ ದೃಢಪಡಿಸಿದೆ. ಹಾಗೆಯೇ ಈ ಫೋನ್‌ಗಳು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಸೆರಾಮಿಕ್ ರಕ್ಷಣೆ ಹಾಗೂ MIL-STD-810H ಮಿಲಿಟರಿ-ದರ್ಜೆಯ ಪ್ರಮಾಣೀಕರಣವನ್ನು ಸಹ ಒಳಗೊಂಡಿರುತ್ತವೆ ಎನ್ನಲಾಗಿದೆ.

ಇನ್ನು ಈ ಫೋನ್‌ 6.67 ಇಂಚಿನ HD+ LCD ಡಿಸ್‌ಪ್ಲೇ ಹೊಂದಿರಲಿದೆ. ಅಲ್ಲದೇ 120Hz ರಿಫ್ರೆಶ್ ರೇಟ್‌ ಜೊತೆಗೆ 1,050 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿರುವ ನಿರೀಕ್ಷೆಗಳು ಇವೆ. ಇನ್ನು ಇದು 4GB RAM + 128GB/ 256GB ಸ್ಟೋರೇಜ್‌ ಆಯ್ಕೆ ಒಳಗೊಂಡಿರಲಿವೆ. ಹಾಗೆಯೇ 50MP ಮುಖ್ಯ ಕ್ಯಾಮೆರಾ ಹಾಗೂ 8MP ಮುಂಭಾಗದ ಕ್ಯಾಮೆರಾ ರಚನೆ ಪಡೆದಿರಲಿವೆ. ಇದರೊಂದಿಗೆ IP64 ನೀರು ಮತ್ತು ಧೂಳು ನಿರೋಧಕ ರೇಟಿಂಗ್ ಸೌಲಭ್ಯ ಇರಬಹುದು.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile