ಜುಲೈ 8 ರಂದು ಬಜೆಟ್ ಬೆಲೆಯಲ್ಲಿ ಮಾರುಕಟ್ಟೆಗೆ ಬರಲಿದೆ Moto G77 Power ಸ್ಮಾರ್ಟ್‌ಫೋನ್!
ಮೊಟೊ G77 ಪವರ್ ಮೊಬೈಲ್ ಇದೇ ಜುಲೈ 8 ರಂದು ಬರಲಿದೆ
ಮೊಟೊರೊಲಾದ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದೆ
ಮೊಟೊ G77 ಪವರ್ ನಾಲ್ಕು ಆಕರ್ಷಕ ಪ್ಯಾಂಟೋನ್ ಕಲರ್ ಆಯ್ಕೆ ಒಳಗೊಂಡಿರಲಿದೆ
ಮೊಟೊರೊಲಾ ಕಂಪನಿಯು ಭಾರತದಲ್ಲಿ ನೂತನವಾಗಿ Moto G77 Power ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಸಂಸ್ಥೆಯು ಈ ಮೊಬೈಲ್ ಇದೇ ಜುಲೈ 8 ರಂದು ಅಧಿಕೃತವಾಗಿ ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಲಿದೆ. ಮುಂಬರುವ ಈ ಮೊಬೈಲ್‌ನ ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಫೋನಿನ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಅಲ್ಲದೇ 50 ಮೆಗಾಪಿಕ್ಸಲ್ ಕ್ಯಾಮೆರಾ ಒಳಗೊಂಡಿರುವ ಜೊತೆಗೆ 32 ಮೆಗಾಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಪಡೆದಿರುವುದು ಕನ್ಫರ್ಮ್ ಆಗಿದೆ. ಹಾಗಾದರೆ ಮುಂಬರುವ ಮೊಟೊ G77 ಪವರ್ ಮೊಬೈಲ್‌ನ ಲಾಂಚ್ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : RCB Edition ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿರುವ Nothing ಮೊಬೈಲ್ ಬ್ರಾಂಡ್!
Moto G77 Power ಮೊಬೈಲ್ ಬಿಡುಗಡೆ ದಿನಾಂಕ
ಮೊಟೊರೊಲಾ ಕಂಪನಿಯು ನೂತನ ಮೊಟೊ G77 ಪವರ್ ಲಾಂಚ್ ಮಾಡಲು ಸಕಲ ಸಜ್ಜಾಗಿದೆ. ಅಂದಹಾಗೆ ಈ ನೂತನ ಸ್ಮಾರ್ಟ್‌ಫೋನ್ ಅನ್ನು ಇದೇ ಜುಲೈ 8 ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಫೋನಿನ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಲಾಂಚ್ ಬಳಿಕ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ಈ ಫೋನ್ ನಾಲ್ಕು ಪ್ಯಾಂಟೋನ್ (ಇಂಪೆನೆಟ್ರಬಲ್, ನಾಟಿಕಲ್ ಬ್ಲೂ, ಫ್ಯೂಷಿಯಾ ರೆಡ್ ಮತ್ತು ಲಾರೆಲ್ ಗ್ರೀನ್) ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿರಲಿದೆ.

ಮೊಟೊ G77 ಪವರ್ ನಿರೀಕ್ಷಿತ ಫೀಚರ್ಸ್
ಹೊಸ ಮೊಟೊ G77 ಪವರ್ ಮೊಬೈಲ್ 6.72 ಇಂಚಿನ FHD+ ಫ್ಲಾಟ್ ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಗಳು ಇವೆ. ಹಾಗೆಯೇ ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಸಪೋರ್ಟ್ ಜೊತೆಗೆ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯ ಬೆಂಬಲ ಹೊಂದಿರಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಓಎಸ್ ಸಪೋರ್ಟ್‌ನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 128GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿರುವುದು ಬಹುತೇಕ ನಿಕ್ಕಿ ಎನ್ನಲಾಗಿದೆ.
ಇನ್ನು ಮೊಟೊ G77 ಪವರ್ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 50MP ಸೋನಿ LYT-600 ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆ. ಹಾಗೆಯೇ 8MP ವೈಲ್ಡ್ ಆಂಗಲ್ ಕ್ಯಾಮೆರಾ ಸಪೋರ್ಟ್ ಪಡೆದಿರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿನ ಕ್ಯಾಮೆರಾವು ಸಹ 32MP ಸೆನ್ಸಾರ್ ಸಾಮರ್ಥ್ಯದಲ್ಲಿ ಇರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿರುವ ಸಾಧ್ಯತೆಗಳು ಇವೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
