ನಾಳೆಯಿಂದ Moto G77 Power ಮೊಬೈಲ್‌ ಫಸ್ಟ್ ಸೇಲ್‌ ಪ್ರಾರಂಭ! ಬೆಲೆ ನೋಡಿ

HIGHLIGHTS

ನಾಳೆಯಿಂದ ಮೊಟೊ G77 ಪವರ್ ಮೊಬೈಲ್ ಖರೀದಿಗೆ ಲಭ್ಯ

ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ

ಮೊಟೊ G77 ಪವರ್ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6000 ಪ್ರೊಸೆಸರ್‌ ಹೊಂದಿದೆ

ನಾಳೆಯಿಂದ Moto G77 Power ಮೊಬೈಲ್‌ ಫಸ್ಟ್ ಸೇಲ್‌ ಪ್ರಾರಂಭ! ಬೆಲೆ ನೋಡಿ

ಮೊಟೊರೊಲಾ ಸಂಸ್ಥೆಯ ನೂತನ Moto G77 Power ಸ್ಮಾರ್ಟ್‌ಫೋನ್ ಮೀಡ್‌ರೇಂಜ್‌ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಜುಲೈ 13 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಿದೆ. ಈ ನೂತನ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6000 ಚಿಪ್‌ಸೆಟ್‌ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ ಈ ಮೊಬೈಲ್‌ Pantone Fuchsia Red, Pantone Impenetrable ಮತ್ತು Pantone Nautical Blue ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹಾಗಾದರೇ ಮೊಟೊ G77 ಪವರ್ ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : BSNL ಟೆಲಿಕಾಂನ ಈ ಬಜೆಟ್‌ ಪ್ಲಾನ್‌ನಲ್ಲಿ 300 ದಿನಗಳ ವ್ಯಾಲಿಡಿಟಿ ಜೊತೆಗೆ ಆಕರ್ಷಕ ಡೇಟಾ

Moto G77 Power ಮೊಬೈಲ್‌ ಸೇಲ್ ಮಾಹಿತಿ

ಭಾರತದಲ್ಲಿ ಮೊಟೊ ಕಂಪನಿಯ ಮೊಟೊ G77 ಪವರ್ ಮೊಬೈಲ್‌ ನಾಳೆ (ಜುಲೈ 13 ರಿಂದ) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಖರೀದಿಗೆ ಲಭ್ಯವಾಗಿವೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 25,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್‌ Pantone Fuchsia Red, Pantone Impenetrable ಮತ್ತು Pantone Nautical Blue ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಸಬಹುದು.

Moto G77 Power

ಮೊಟೊ G77 ಪವರ್ ಮೊಬೈಲ್‌ ಫೀಚರ್ಸ್‌

ಮೊಟೊ G77 ಪವರ್ ಮೊಬೈಲ್‌ 6.72 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,050 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6000 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ಹಲೋ UI ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಮೊಟೊ G77 ಪವರ್ ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 ಸೆನ್ಸಾರ್‌ ಅನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile