ಬಜೆಟ್ ಬೆಲೆಯಲ್ಲಿ ಹೊಸ Moto G77 Power ಬಿಡುಗಡೆ! 7,000mAh ಬ್ಯಾಟರಿ ವಿಶೇಷ
ಮೊಟೊ G77 ಪವರ್ ಫೋನ್ ಆಂಡ್ರಾಯ್ಡ್ 16 ಓಎಸ್ ಪಡೆದುಕೊಂಡಿದೆ
ಈ ಹೊಸ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸೌಲಭ್ಯ ಹೊಂದಿದೆ
ಮೊಟೊ G77 ಪವರ್ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6000 ಪ್ರೊಸೆಸರ್ ಒಳಗೊಂಡಿದೆ
ಜನಪ್ರಿಯ ಮೊಟೊರೊಲಾ ಮೊಬೈಲ್ ಕಂಪನಿಯು ಹೊಸದಾಗಿ Moto G77 Power ಮೊಬೈಲ್ ಅನ್ನು ಇಂದು (ಜುಲೈ 8 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬಜೆಟ್ ಬೆಲೆಯಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6000 ಚಿಪ್‌ಸೆಟ್ ಪ್ರೊಸೆಸರ್ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್ Pantone Fuchsia Red, Pantone Impenetrable ಮತ್ತು Pantone Nautical Blue ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಮೊಟೊ G77 ಪವರ್ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Google Pixel 11 ಸರಣಿ ಲಾಂಚ್‌ಗೆ ದಿನಾಂಕ ನಿಗದಿ; ಲೈವ್ ವೀಕ್ಷಣೆ ಹೇಗೆ? ನಿರೀಕ್ಷಿತ ಬೆಲೆ, ಫೀಚರ್ಸ್ ನೋಡಿ
Moto G77 Power ಮೊಬೈಲ್ ಬೆಲೆ ಹಾಗೂ ಲಭ್ಯತೆ
ಮೊಟೊ ಕಂಪನಿಯ ಮೊಟೊ G77 ಪವರ್ ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ 25,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 256GB ಸ್ಟೋರೇಜ್ ವೇರಿಯಂಟ್ ಮಾಡೆಲ್ 38,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ Pantone Fuchsia Red, Pantone Impenetrable ಮತ್ತು Pantone Nautical Blue ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಇನ್ನು ಈ ಫೋನ್ ಜುಲೈ 13 ರಂದು ಫ್ಲಿಪ್‌ಕಾರ್ಟ್ ಹಾಗೂ ಮೊಟೊರೊಲಾ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ.

ಮೊಟೊ G77 ಪವರ್ ಮೊಬೈಲ್ ಫೀಚರ್ಸ್
ಮೊಟೊ G77 ಪವರ್ ಮೊಬೈಲ್ 6.72 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,050 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6000 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ಹಲೋ UI ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಮೊಟೊ G77 ಪವರ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 ಸೆನ್ಸಾರ್ ಅನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
