68W ಟರ್ಬೋಪವರ್ ಚಾರ್ಜಿಂಗ್ ಸೌಲಭ್ಯ ಇರುವ Motorola Edge 50 ಬೆಲೆ ಇಳಿಕೆ!
ಮೊಟೊರೊಲಾ ಎಡ್ಜ್ 50 ಫೋನ್ Flipkart ತಾಣದಲ್ಲಿ ಖರೀದಿಗೆ ಲಭ್ಯ
ಮೊಟೊರೊಲಾ ಕಂಪನಿಯ ಈ ಫೋನ್ 5,000mAh ಬ್ಯಾಟರಿ ಪಡೆದುಕೊಂಡಿದೆ
ಈ ಮೊಬೈಲ್ Peach Fuzz ಮತ್ತು ಜಂಗಲ್ ಗ್ರೀನ್ ಕಲರ್ ಆಯ್ಕೆ ಹೊಂದಿದೆ
ಜನಪ್ರಿಯ ಮೊಟೊರೊಲಾ ಕಂಪನಿಯ Motorola Edge 50 ಮೊಬೈಲ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಮೊಟೊರೊಲಾ ಎಡ್ಜ್ 50 ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಮೊಟೊರೊಲಾ ಸಂಸ್ಥೆಯ ಈ ಮೊಬೈಲ್ ಕ್ವಾಲ್ಕಮ್ Snapdragon 7 Gen 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 50 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಹೊಸ Oppo F33 5G ಸ್ಮಾರ್ಟ್‌ಫೋನ್ ಈಗ ಪ್ರಿ-ಆರ್ಡರ್‌ಗೆ ಲಭ್ಯ! ಆಫರ್ ಸಹ ಇದೆ
Motorola Edge 50 ಫೋನ್ ಬೆಲೆಯಲ್ಲಿ ಭಾರೀ ಕಡಿತ
ಮೊಟೊರೊಲಾ ಎಡ್ಜ್ 50 ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB + 256GB ವೇರಿಯಂಟ್ ಬೆಲೆ 32,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 21,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ Peach Fuzz ಮತ್ತು ಜಂಗಲ್ ಗ್ರೀನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.

ಮೊಟೊರೊಲಾ ಎಡ್ಜ್ 50 ಫೀಚರ್ಸ್ ಮಾಹಿತಿ
ಮೊಟೊರೊಲಾ ಎಡ್ಜ್ 50 ಮೊಬೈಲ್ ಡಿಸ್‌ಪ್ಲೇಯು 6.67 ಇಂಚಿನ 1.5K POLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್ ರೇಟ್ ಹೊಂದಿದ್ದು ಸೂಪರ್ HD ರೆಸಲ್ಯೂಶನ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಮೊಬೈಲ್ ಕ್ವಾಲ್ಕಮ್ Snapdragon 7 Gen 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಸಂಸ್ಥೆಯ ಈ ಮೊಬೈಲ್ 8GB + 256GB ಹಾಗೂ 12 GB RAM + 512 GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.
ಹಾಗೆಯೇ ಮೊಟೊರೊಲಾ ಎಡ್ಜ್ 50 ಮೊಬೈಲ್ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYTIA 700C ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾವು 13MP ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾವು 10MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಹೊಂದಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿ ಜೊತೆಗೆ 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile