Motorola Edge 60 Fusion 5G ಸ್ಮಾರ್ಟ್‌ಫೋನ್ ಖರೀದಿಸಲು ಇದೇ ಸರಿಯಾದ ಸಮಯ!
ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಫೋನ್ ಬೆಲೆ ಇಳಿಕೆ
ಮೊಟೊರೊಲಾ ಸಂಸ್ಥೆಯ ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಪಡೆದುಕೊಂಡಿದೆ
ಮೊಟೊರೊಲಾದ ಈ ಫೋನ್ 32MP ಸೆಲ್ಫಿ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ
ಇ ಕಾಮರ್ಸ್ ವೆಬ್‌ಸೈಟ್‌ಗಳು ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಅತ್ಯುತ್ತಮ ಆಫರ್ ಘೋಷಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತವೆ. ಸದ್ಯ ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಮೊಟೊರೊಲಾ ಕಂಪನಿಯ Motorola Edge 60 Fusion 5G ಮೊಬೈಲ್‌ಗೆ ಭರ್ಜರಿ ರಿಯಾಯಿತಿ ಘೋಷಿಸಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಮೊಬೈಲ್ Mediatek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ ಹಾಗೂ 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಲಭ್ಯ ಪಡೆದುಕೊಂಡಿದೆ. ಇದರೊಂದಿಗೆ 50MP ಕ್ಯಾಮೆರಾ ಸಪೋರ್ಟ್ ಸಹ ಒಳಗೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : Jio ಟೆಲಿಕಾಂನ ಈ ಕಡಿಮೆ ಬೆಲೆಯ ಪ್ಲಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಜೊತೆಗೆ 105GB ಡೇಟಾ
Motorola Edge 60 Fusion 5G ಬೆಲೆ ಇಳಿಕೆ ಕಂಡಿದೆ
ಸ್ಟೈಲಿಶ್ ಲುಕ್ ಹೊಂದಿರುವ ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಮೊಬೈಲ್ ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್ 8GB + 128GB ವೇರಿಯಂಟ್ ಬೆಲೆ 24,999 ರೂಗಳು ಪ್ರೈಸ್‌ಟ್ಯಾಗ್‌ನಲ್ಲಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 19,999 ರೂಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ PANTONE Mykonos Blue, PANTONE Slipstream, PANTONE Zephyr ಹಾಗೂ PANTONE Amazonite ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಫೀಚರ್ಸ್
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಮೊಬೈಲ್ 120 Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ ಕ್ವಾಡ್ ಕರ್ವ್ಡ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 4500 nits HDR ಪೀಕ್ ಬ್ರೈಟ್‌ನೆಸ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Mediatek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 15 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 8GB + 256GB ಹಾಗೂ 12GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು ಮೊಟೊರೊಲಾ ಈ ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 13MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಮೊಬೈಲ್ 5500 ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile