12GB RAM ಸೌಲಭ್ಯ ಇರುವ Motorola Edge 60 Fusion 5G ಮೊಬೈಲ್‌ಗೆ ಈಗ ಬಿಗ್ ಡಿಸ್ಕೌಂಟ್‌!

HIGHLIGHTS

ಮೊಟೊರೊಲಾ ಎಡ್ಜ್‌ 60 ಫ್ಯೂಶನ್ ಫೋನಿಗೆ ಅಮೆಜಾನ್‌ನಲ್ಲಿ ಆಫರ್‌ ಲಭ್ಯ

ಮೊಟೊರೊಲಾ ಎಡ್ಜ್‌ 60 ಫ್ಯೂಶನ್ ಮೊಬೈಲ್‌ 5,500mAh ಬ್ಯಾಟರಿ ಪಡೆದಿದೆ

ಮೊಟೊರೊಲಾ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ನಾಲ್ಕು ಆಕರ್ಷಕ ಕಲರ್‌ನಲ್ಲಿ ಲಭ್ಯ

12GB RAM ಸೌಲಭ್ಯ ಇರುವ Motorola Edge 60 Fusion 5G ಮೊಬೈಲ್‌ಗೆ ಈಗ ಬಿಗ್ ಡಿಸ್ಕೌಂಟ್‌!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 60 Fusion 5G ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ Mediatek Dimensity 7400 ಚಿಪ್‌ಸೆಟ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 5,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್‌ 60 ಫ್ಯೂಶನ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಕಡಿಮೆ ಬೆಲೆಯ Lava Bold N2 ಮೊಬೈಲ್‌ಗೆ ಅಮೆಜಾನ್‌ನಲ್ಲಿ ಭಾರೀ ರಿಯಾಯಿತಿ!

Motorola Edge 60 Fusion ಫೋನಿಗೆ ಭರ್ಜರಿ ಆಫರ್‌

ಮೀಡ್‌ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್‌ 60 ಫ್ಯೂಶನ್ 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 37, 999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 28,589 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಮೊಟೊರೊಲಾ ಎಡ್ಜ್‌ 60 ಫ್ಯೂಶನ್ 5G ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Motorola Edge 60 Fusion

ಮೊಟೊರೊಲಾ ಎಡ್ಜ್‌ 60 ಫ್ಯೂಶನ್ 5G ಫೀಚರ್ಸ್‌

ಮೊಟೊರೊಲಾ ಎಡ್ಜ್‌ 60 ಫ್ಯೂಶನ್ 5G ಸ್ಮಾರ್ಟ್‌ಫೋನ್‌ 120 Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ ಕ್ವಾಡ್‌ ಕರ್ವ್ಡ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 4500 nits HDR ಪೀಕ್ ಬ್ರೈಟ್‌ನೆಸ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ Mediatek Dimensity 7400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 15 ಸಪೋರ್ಟ್‌ ಒಳಗೊಂಡಿದೆ. ಅಲ್ಲದೇ ಇದು 8GB + 256GB ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಇನ್ನು ಮೊಟೊರೊಲಾ ಎಡ್ಜ್‌ 60 ಫ್ಯೂಶನ್ 5G ಮೊಬೈಲ್‌ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 13MP ಅಲ್ಟ್ರಾ ವೈಡ್‌ ಸೆನ್ಸಾರ್‌ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 32MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಫೋನ್‌ 5,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 68W ಟರ್ಬೋಪವರ್‌ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile