ಮೊಬೈಲ್ ಮಾರುಕಟ್ಟೆಯಲ್ಲಿ Motorola ಕಂಪನಿಯ ಎಡ್ಜ್ ಸರಣಿಯ ಫೋನ್‌ಗಳ ಸಿಕ್ಕಾಪಟ್ಟೆ ಸದ್ದು ಮಾಡಿವೆ. ಅವುಗಳಲ್ಲಿ Motorola Edge 60 Fusion 5G ಮೊಬೈಲ್ ಮೀಡ್‌ರೇಂಜ್‌ನಲ್ಲಿ ಖರೀದಿದಾರರ ಗಮನ ಸೆಳೆದಿದೆ. ಇದೀಗ Motorola Edge 60 Fusion 5G ಸ್ಮಾರ್ಟ್‌ಫೋನ್ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದ್ದು ಮೊಬೈಲ್ ಪ್ರಿಯರಿಗೆ ಖುಷಿ ಎನಿಸಿದೆ. ಇದರೊಂದಿಗೆ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಮೂಲಕ ಹೆಚ್ಚುವರಿ ರಿಯಾಯಿತಿ ಕೂಡಾ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ Mediatek Dimensity 7400 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಈ ಫೋನ್ ನಾಲ್ಕು ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. Flipkart ಇ ಕಾಮರ್ಸ್ ತಾಣದಲ್ಲಿ Motorola Edge 60 Fusion 5G ಫೋನಿಗೆ ಲಭ್ಯ ಇರುವ ಆಫರ್ ಬೆಲೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Boat Chrome Iris ಸ್ಮಾರ್ಟ್‌ವಾಚ್ ಬಿಡುಗಡೆ! ಬಿಗ್ ಬ್ಯಾಟರಿ ಸೌಲಭ್ಯ ಇರುವ ಈ ವಾಚ್ ಬೆಲೆ ಎಷ್ಟು?
Motorola Edge 60 Fusion 5G ಮೊಬೈಲ್ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ. Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಈ ಮೊಬೈಲ್‌ನ 8GB + 128GB ವೇರಿಯಂಟ್ 24,999 ರೂಗಳ ಪ್ರೈಸ್‌ಟ್ಯಾಗ್ ಪಡೆದಿದ್ದು, ಆದರೆ ಪ್ರಸ್ತುತ ನೇರವಾಗಿ 20,999 ರೂಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಸಕ್ತ ಖರೀದಿದಾರರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದು. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಭಿನ್ನ EMI ಆಯ್ಕೆಗಳನ್ನು ಪಡೆಯಬಹುದು. ಇನ್ನು ಈ ಫೋನ್ PANTONE Mykonos Blue, PANTONE Slipstream, PANTONE Zephyr ಹಾಗೂ PANTONE Amazonite ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
Motorola Edge 60 Fusion 5G ಸ್ಮಾರ್ಟ್‌ಫೋನ್ 120 Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ ಕ್ವಾಡ್ ಕರ್ವ್ಡ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 4500 nits HDR ಪೀಕ್ ಬ್ರೈಟ್‌ನೆಸ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Mediatek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 15 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 8GB + 256GB ಹಾಗೂ 12GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು Motorola Edge 60 Fusion 5G ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 13MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಫೋನ್ 5500 ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.