ಮೊಟೊರೊಲಾ ಭಿನ್ನ ಪ್ರೈಸ್ ಟ್ಯಾಗ್ ರೇಂಜ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ಎಡ್ಜ್ ಸರಣಿಯ ಮೊಬೈಲ್‌ಗಳು ಹೆಚ್ಚು ಸದ್ದು ಮಾಡಿವೆ. ಅವುಗಳ ಪೈಕಿ ಕಂಪನಿಯ Motorola Edge 60 Fusion 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ಬೆಲೆ ಇಳಿಕೆ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Mediatek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ನಾಲ್ಕು ಆಕರ್ಷಕ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಜನ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 512GB ಸ್ಟೋರೇಜ್ ಇರುವ Oppo Find X8 Pro ಮೊಬೈಲ್‌ಗೆ ಈಗ ಬಿಗ್ ಡಿಸ್ಕೌಂಟ್!
ಮೊಟೊರೊಲಾ ಎಡ್ಜ್ 60 ಫ್ಯೂಜನ್ 5G ಮೊಬೈಲ್ ಮೀಡ್‌ರೇಂಜ್ ವಿಭಾಗದಲ್ಲಿ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂ.ಗಳು ಆಗಿದ್ದು ಆದರೆ ಇದೀಗ ಈ ಮೊಬೈಲ್ ಅನ್ನು 22,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಈ ಫೋನ್ PANTONE Mykonos Blue, PANTONE Slipstream, PANTONE Zephyr ಹಾಗೂ PANTONE Amazonite ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ.
ಮೊಟೊರೊಲಾ ಎಡ್ಜ್ 60 ಫ್ಯೂಜನ್ 5G ಸ್ಮಾರ್ಟ್‌ಫೋನ್ 120 Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ ಕ್ವಾಡ್ ಕರ್ವ್ಡ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 4500 nits HDR ಪೀಕ್ ಬ್ರೈಟ್‌ನೆಸ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Mediatek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 15 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 8GB + 256GB ಹಾಗೂ 12GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು ಮೊಟೊರೊಲಾ ಎಡ್ಜ್ 60 ಫ್ಯೂಜನ್ 5G ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 13MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಮೊಬೈಲ್ 5,500 ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.