ಸ್ಟೈಲಿಶ್‌ ಲುಕ್‌ ಇರುವ Motorola Edge 60 Fusion 5G ಈಗ ಆಫರ್‌ನಲ್ಲಿ ಲಭ್ಯ!

HIGHLIGHTS

ಮೊಟೊರೊಲಾದ ಬಜೆಟ್‌ ಬೆಲೆಯ ಈ ಫೋನ್‌ಗೆ ಈಗ ಡಿಸ್ಕೌಂಟ್‌

ಈ ಸ್ಮಾರ್ಟ್‌ಫೋನ್‌ 5,500mAh ಬ್ಯಾಟರಿ ಸಪೋರ್ಟ್‌ ಹೊಂದಿದೆ

ಮೊಟೊದ ಈ ಮೊಬೈಲ್‌ ನಾಲ್ಕು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯ

ಸ್ಟೈಲಿಶ್‌ ಲುಕ್‌ ಇರುವ Motorola Edge 60 Fusion 5G ಈಗ ಆಫರ್‌ನಲ್ಲಿ ಲಭ್ಯ!

ಪ್ರಸ್ತುತ ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಸಮ್ಮರ್ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 60 Fusion 5G ಮೊಬೈಲ್‌ ಸಹ ಆಕರ್ಷಕ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ Mediatek Dimensity 7400 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್‌ 60 ಫ್ಯೂಜನ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vi ಟೆಲಿಕಾಂನ ಈ ಪ್ಲಾನಿನಲ್ಲಿ 180 ದಿನಗಳ ವ್ಯಾಲಿಡಿಟಿ ಜೊತೆಗೆ Unlimited ಡೇಟಾ! ಬೆಲೆ ಎಷ್ಟು?

Motorola Edge 60 Fusion 5G ಬೆಲೆಯಲ್ಲಿ ಇಳಿಕೆ

ಮೊಟೊರೊಲಾ ಎಡ್ಜ್‌ 60 ಫ್ಯೂಜನ್ 5G ಮೊಬೈಲ್‌ ಅಗ್ಗದ ದರದಲ್ಲಿ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 24,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 20,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್‌ PANTONE Mykonos Blue, PANTONE Slipstream, PANTONE Zephyr ಹಾಗೂ PANTONE Amazonite ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಖರೀದಿಸಬಹುದಾಗಿದೆ.

Motorola Edge 60 Fusion

ಮೊಟೊರೊಲಾ ಎಡ್ಜ್‌ 60 ಫ್ಯೂಜನ್ 5G ಫೀಚರ್ಸ್‌

ಮೊಟೊರೊಲಾ ಎಡ್ಜ್‌ 60 ಫ್ಯೂಜನ್ 5G ಸ್ಮಾರ್ಟ್‌ಫೋನ್‌ 120 Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ ಕ್ವಾಡ್‌ ಕರ್ವ್ಡ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 4500 nits HDR ಪೀಕ್ ಬ್ರೈಟ್‌ನೆಸ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ Mediatek Dimensity 7400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 15 ಸಪೋರ್ಟ್‌ ಒಳಗೊಂಡಿದೆ. ಅಲ್ಲದೇ ಇದು 8GB + 256GB ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಇನ್ನು ಮೊಟೊರೊಲಾ ಎಡ್ಜ್‌ 60 ಫ್ಯೂಜನ್ 5G ಮೊಬೈಲ್‌ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 13MP ಅಲ್ಟ್ರಾ ವೈಡ್‌ ಸೆನ್ಸಾರ್‌ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 32MP ಕ್ಯಾಮೆರಾವನ್ನು ಒಳಗೊಂಡಿದ್ದು 4K ಗುಣಮಟ್ಟದ ಸೆಲ್ಫಿ ಫೋಟೋಗಳನ್ನು ಸೆರೆಹಿಡಿಯಬಹುದು. ಹಾಗೆಯೇ ಈ ಫೋನ್‌ 5,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 68W ಟರ್ಬೋಪವರ್‌ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile