Motorola Edge 60 Pro ಮೊಬೈಲ್‌ ಖರೀದಿ ಮಾಡಲು ಇದುವೇ ಬೆಸ್ಟ್‌ ಟೈಮ್‌! 6,000mAh ಬ್ಯಾಟರಿ

HIGHLIGHTS

ಮೊಟೊರೊಲಾ ಎಡ್ಜ್‌ 60 ಪ್ರೊ ಈಗ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ

ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ

ಮೊಟೊದ ಈ ಮೊಬೈಲ್‌ನ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಸೌಲಭ್ಯ ಪಡೆದಿದೆ

ಮೊಟೊರೊಲಾ ಎಡ್ಜ್‌ ಸರಣಿಯಲ್ಲಿ ಗುರುತಿಸಿಕೊಂಡಿರುವ Motorola Edge 60 Pro ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಅತ್ಯುತ್ತಮ ಟೈಮ್‌ ಎನಿಸಿದೆ. ಹೌದು, ಪ್ರಸ್ತುತ ಮೊಟೊರೊಲಾ ಎಡ್ಜ್‌ 60 ಪ್ರೊ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಎಕ್ಸ್‌ಟ್ರಿಮ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್‌ ಪ್ಯಾಂಟೋನ್ ಡ್ಯಾಜ್ಲಿಂಗ್ ಬ್ಲೂ, ಪ್ಯಾಂಟೋನ್ ಶ್ಯಾಡೋ, ಪ್ಯಾಂಟೋನ್ ಸ್ಪಾರ್ಕ್ಲಿಂಗ್ ಗ್ರೇಪ್ ಮತ್ತು ಪ್ಯಾಂಟೋನ್ ವಾಲ್ನಟ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್‌ 60 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ ಈ ಅಗ್ಗದ ಪ್ಲಾನಿನಲ್ಲಿ ಪ್ರತಿದಿನ ಡೇಟಾ ಜೊತೆಗೆ ಎಂಟರ್‌ಟೈನ್‌ಮೆಂಟ್ ಧಮಾಕಾ!

Motorola Edge 60 Pro ಮೊಬೈಲ್‌ ಬೆಲೆಯಲ್ಲಿ ಇಳಿಕೆ

ಸ್ಟೈಲಿಶ್‌ ಲುಕ್‌ನಲ್ಲಿ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್‌ 60 ಪ್ರೊ ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 36,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 29,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಮೊಬೈಲ್‌ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಮೊಟೊರೊಲಾ ಎಡ್ಜ್‌ 60 ಪ್ರೊ ಫೀಚರ್ಸ್‌ ಹೀಗಿವೆ

ಮೊಟೊರೊಲಾ ಎಡ್ಜ್‌ 60 ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇಯು 6.7 ಇಂಚಿನ ಕರ್ವ್ಡ pOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 4,500 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ MediaTek Dimensity 8350 ಎಕ್ಸ್‌ಟ್ರಿಮ್‌ ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 256GB ಹಾಗೂ 512GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಮೊಟೊರೊಲಾ ಎಡ್ಜ್‌ 60 ಪ್ರೊ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ದ್ವಿತೀಯ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಹಾಗೂ ಮೂರನೇ ಕ್ಯಾಮೆರಾ ಸಹ 10MP ಸೆನ್ಸಾರ್‌ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್‌ 6,000mAh ಬ್ಯಾಟರಿ ಜೊತೆಗೆ 90W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ. ಅಲ್ಲದೇ 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :