ಜನಪ್ರಿಯ Motorola Edge 60 Pro ಮೊಬೈಲ್ ಬೆಲೆಯಲ್ಲಿ ಈಗ ಭರ್ಜರಿ ರಿಯಾಯಿತಿ!
ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊರೊಲಾ ಎಡ್ಜ್ 60 ಪ್ರೊ ಆಫರ್‌ನಲ್ಲಿ ಲಭ್ಯ
ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ 6,000mAh ಬ್ಯಾಟರಿ ಪವರ್ ಪಡೆದಿದೆ
ಈ ಫೋನ್ ಮೀಡಿಯಾಟೆಕ್ ಡೈಮನಿಸಿಟಿ ಡೈಮೆನ್ಸಿಟಿ 8350 ಎಕ್ಸ್‌ಟ್ರಿಮ್ ಪ್ರೊಸೆಸರ್ ಹೊಂದಿದೆ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ಮೊಟೊ ಕಂಪನಿಯ Motorola Edge 60 Pro ಸ್ಮಾರ್ಟ್‌ಫೋನ್ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮನಿಸಿಟಿ ಡೈಮೆನ್ಸಿಟಿ 8350 ಎಕ್ಸ್‌ಟ್ರಿಮ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಪ್ಯಾಂಟೋನ್ ಡ್ಯಾಜ್ಲಿಂಗ್ ಬ್ಲೂ, ಪ್ಯಾಂಟೋನ್ ಶ್ಯಾಡೋ, ಪ್ಯಾಂಟೋನ್ ಸ್ಪಾರ್ಕ್ಲಿಂಗ್ ಗ್ರೇಪ್ ಮತ್ತು ಪ್ಯಾಂಟೋನ್ ವಾಲ್ನಟ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : POCO X8 Power ಸ್ಮಾರ್ಟ್‌ಫೋನ್ ಬಿಡುಗಡೆಗೆ ಮುಹೂರ್ತ ಫಿಕ್ಸ್! 10,000m ಬ್ಯಾಟರಿ ಖಚಿತ
Motorola Edge 60 Pro ಮೊಬೈಲ್‌ಗೆ ಬಿಗ್ ಡಿಸ್ಕೌಂಟ್
ಆಕರ್ಷಕ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 33,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಪ್ಯಾಂಟೋನ್ ಡ್ಯಾಜ್ಲಿಂಗ್ ಬ್ಲೂ, ಪ್ಯಾಂಟೋನ್ ಶ್ಯಾಡೋ, ಪ್ಯಾಂಟೋನ್ ಸ್ಪಾರ್ಕ್ಲಿಂಗ್ ಗ್ರೇಪ್ ಮತ್ತು ಪ್ಯಾಂಟೋನ್ ವಾಲ್ನಟ್ ಕಲರ್ ಆಯ್ಕೆಯಲ್ಲಿ ಲಭ್ಯ.

ಮೊಟೊರೊಲಾ ಎಡ್ಜ್ 60 ಪ್ರೊ ಫೀಚರ್ಸ್ ಮಾಹಿತಿ
ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ ಡಿಸ್‌ಪ್ಲೇಯು 6.7 ಇಂಚಿನ ಕರ್ವ್ಡ pOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 4,500 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ MediaTek Dimensity 8350 ಎಕ್ಸ್‌ಟ್ರಿಮ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 256GB ಹಾಗೂ 512GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಹಾಗೆಯೇ ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಸೆಕೆಂಡರಿ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಹಾಗೂ ತೃತೀಯ ಕ್ಯಾಮೆರಾ ಸಹ 10MP ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 6,000mAh ಬ್ಯಾಟರಿ ಜೊತೆಗೆ 90W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ. ಅಲ್ಲದೇ 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
