Motorola Edge 60 Pro ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಭಾರೀ ಡಿಸ್ಕೌಂಟ್‌

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್‌ 60 ಪ್ರೊ ಬಿಗ್ ಆಫರ್‌ನಲ್ಲಿ ಲಭ್ಯ

ಮೊಟೊರೊಲಾ ಎಡ್ಜ್‌ 60 ಪ್ರೊ ಫೋನ್‌ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಪಡೆದಿದೆ

ಮೊಟೊರೊಲಾ ಎಡ್ಜ್‌ 60 ಪ್ರೊ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ

ಮೊಟೊರೊಲಾ ಕಂಪನಿಯ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾಗಿರುವ Motorola Edge 60 Pro ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ MediaTek Dimensity 8350 ಎಕ್ಸ್‌ಟ್ರಿಮ್‌ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಮಿಡ್‌ನೈಟ್ ಮೇವರಿಕ್, ವೈಟ್ ನೈಟ್ ಹಾಗೂ ಪರ್ಪಲ್ ಫ್ಯಾಂಟಮ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್‌ 60 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಗ್ಗದ ಬೆಲೆಯಲ್ಲಿ Jio Bharat V4 4G ಮೊಬೈಲ್‌ ಬಿಡುಗಡೆ: ಬೆಲೆ ಹಾಗೂ ಫೀಚರ್ಸ್‌ ನೋಡಿ

Motorola Edge 60 Pro ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಆಕರ್ಷಕ ಲುಕ್‌ ಜೊತೆಗೆ ಬೆಸ್ಟ್‌ ಕ್ಯಾಮೆರಾ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್‌ 60 ಪ್ರೊ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 36,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 29,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಪ್ಯಾಂಟೋನ್ ಡ್ಯಾಜ್ಲಿಂಗ್ ಬ್ಲೂ, ಪ್ಯಾಂಟೋನ್ ಶ್ಯಾಡೋ, ಪ್ಯಾಂಟೋನ್ ಸ್ಪಾರ್ಕ್ಲಿಂಗ್ ಗ್ರೇಪ್ ಮತ್ತು ಪ್ಯಾಂಟೋನ್ ವಾಲ್ನಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Motorola Edge 60 Pro

ಮೊಟೊರೊಲಾ ಎಡ್ಜ್‌ 60 ಪ್ರೊ ಫೀಚರ್ಸ್‌ ಮಾಹಿತಿ

ಮೊಟೊರೊಲಾ ಎಡ್ಜ್‌ 60 ಪ್ರೊ ಮೊಬೈಲ್‌ ಡಿಸ್‌ಪ್ಲೇಯು 6.7 ಇಂಚಿನ ಕರ್ವ್ಡ pOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 4,500 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ MediaTek Dimensity 8350 ಎಕ್ಸ್‌ಟ್ರಿಮ್‌ ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 256GB ಹಾಗೂ 512GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ ಮೊಟೊರೊಲಾ ಎಡ್ಜ್‌ 60 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಕೆಂಡರಿ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಹಾಗೂ ತೃತೀಯ ಕ್ಯಾಮೆರಾ ಸಹ 10MP ಸೆನ್ಸಾರ್‌ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 6,000mAh ಬ್ಯಾಟರಿ ಜೊತೆಗೆ 90W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ. ಅಲ್ಲದೇ 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :