Digit.in

68W ಟರ್ಬೊಪವರ್ ಚಾರ್ಜಿಂಗ್‌ ಇರುವ Motorola Edge 70 Fusion ಬೆಲೆಯಲ್ಲಿ ಕಡಿತ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊ ಎಡ್ಜ್ 70 ಫ್ಯೂಷನ್ ಮೊಬೈಲ್‌ಗೆ ಬಿಗ್ ಆಫರ್‌

ಮೊಟೊ ಎಡ್ಜ್ 70 ಫ್ಯೂಷನ್ ಮೊಬೈಲ್‌ 7,000mAh ಬ್ಯಾಟರಿ ಸೌಲಭ್ಯ ಪಡೆದಿದೆ

ಮೊಟೊ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

68W ಟರ್ಬೊಪವರ್ ಚಾರ್ಜಿಂಗ್‌ ಇರುವ Motorola Edge 70 Fusion ಬೆಲೆಯಲ್ಲಿ ಕಡಿತ!

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 70 Fusion ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Motorola Edge 70 Fusion ಫೋನ್‌ ಬೆಲೆಯಲ್ಲಿ ಇಳಿಕೆ

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊ ಎಡ್ಜ್ 70 ಫ್ಯೂಷನ್ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 59,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

motorola edge 70 fusion
motorola edge 70 fusion

ಮೊಟೊ ಎಡ್ಜ್ 70 ಫ್ಯೂಷನ್ ಫೀಚರ್ಸ್‌ ಮಾಹಿತಿ

ಮೊಟೊ ಎಡ್ಜ್ 70 ಫ್ಯೂಷನ್ ಮೊಬೈಲ್‌ 6.78 ಇಂಚಿನ 1.5K ಕ್ವಾಡ್ ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 44Hz ರಿಫ್ರೆಶ್ ರೇಟ್‌ ಜೊತೆಗೆ 5,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸಪೋರ್ಟ್‌ ಜೊತೆಗೆ 68W ಟರ್ಬೊಪವರ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

ಹಾಗೆಯೇ ಮೊಟೊ ಎಡ್ಜ್ 70 ಫ್ಯೂಷನ್ ಮೊಬೈಲ್‌ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYT-710 ಸೆನ್ಸಾರ್‌ ಆಗಿದೆ. ಹಾಗೆಯೇ ಎರಡನೇ ಕ್ಯಾಮೆರಾವು 13MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್‌ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಫೋನ್ ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ ಸಪೋರ್ಟ್‌ ಜೊತೆಗೆ ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile