Motorola Edge 70 Fusion 5G phone gets price drop under Rs 30000 on Amazon deal
ಮೊಟೊರೊಲ ಕಂಪನಿಯ Motorola Edge 70 Fusion ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಪವರ್‌ಫುಲ್ ಬ್ಯಾಟರಿ ಬ್ಯಾಕ್‌ಅಪ್ ಇರುವ Poco X8 5G ಬೆಲೆಯಲ್ಲಿ ಸಖತ್ ಇಳಿಕೆ!
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ 30,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್ 6.78 ಇಂಚಿನ 1.5K ಕ್ವಾಡ್ ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 44Hz ರಿಫ್ರೆಶ್ ರೇಟ್ ಜೊತೆಗೆ 5,200 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸಪೋರ್ಟ್ ಜೊತೆಗೆ 68W ಟರ್ಬೊಪವರ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
ಹಾಗೆಯೇ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYT-710 ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 13MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಫೋನ್ ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ ಸಪೋರ್ಟ್ ಜೊತೆಗೆ ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ.