ನಾಳೆ Motorola Edge 70 Fusion ಮಾರಾಟ! ಇದು 7000mAh ಬ್ಯಾಟರಿ ಇರುವ ಫೋನ್‌

HIGHLIGHTS

ನಾಳೆ (ಮಾ 12 ರಂದು) ಫ್ಲಿಪ್‌ಕಾರ್ಟ್‌ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಖರೀದಿಗೆ ಲಭ್ಯ

ಮೊಟೊರೊಲಾ ಕಂಪನಿಯ ಈ ಮೊಬೈಲ್‌ 7000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ

Tecno Pova Curve 2 ಫೋನ್‌ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಬಣ್ಣಗಳ ಆಯ್ಕೆ ಹೊಂದಿದೆ

ನಾಳೆ Motorola Edge 70 Fusion ಮಾರಾಟ! ಇದು 7000mAh ಬ್ಯಾಟರಿ ಇರುವ ಫೋನ್‌

ಮೊಟೊರೊಲಾ ಮೊಬೈಲ್ ಬ್ರ್ಯಾಂಡ್ ಇತ್ತೀಚಿಗೆ ಬಿಡುಗಡೆ ಮಾಡಿರುವ Motorola Edge 70 Fusion ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನಿನ ಮಾರಾಟ ನಾಳೆ (ಮಾರ್ಚ್‌ 12 ರಿಂದ) ಪ್ರಾರಂಭವಾಗಲಿದೆ. ಈ ಮೊಬೈಲ್‌ Snapdragon 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿರುವ ಜೊತೆಗೆ 7000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ನೂತನ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಕಲರ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್ ಸೇಲ್‌, ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Amazon EPL 2026 ಸೇಲ್‌: Redmi Note 15 5G ಖರೀದಿಸುವು ಪ್ಲಾನ್‌ ಇದ್ರೆ, ತಡ ಮಾಡಬೇಡಿ!

Motorola Edge 70 Fusion ಬೆಲೆ ಹಾಗೂ ಲಭ್ಯತೆ

ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ ನಾಳೆ (ಮಾರ್ಚ್‌ 12 ರಿಂದ) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮಧ್ಯಾಹ್ನ 12 ಗಂಟೆಗೆ ಸೇಲ್‌ ಪ್ರಾರಂಭಿಸಲಿದೆ. ಇನ್ನು ಈ ಮೊಬೈಲ್‌ನ 8GB + 256GB ಸ್ಟೋರೇಜ್‌ ವೇರಿಯಂಟ್‌ 26,999 ರೂಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 12GB + 256GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ 32,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಆಗಿವೆ. ಆಸಕ್ತ ಗ್ರಾಹಕರು ಈ ಫೋನ್‌ ಅನ್ನು ಫ್ಲಿಪ್‌ಕಾರ್ಟ್ ಹಾಗೂ Motorola.in ವೆಬ್‌ಸೈಟ್‌ ಮೂಲಕ ಖರೀದಿಸಬಹುದು.

Motorola Edge 70 Fusion

ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ ಫೀಚರ್ಸ್‌

ಮೊಟೊರೊಲಾ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್‌ 6.78 ಇಂಚಿನ 1.5K ಕ್ವಾಡ್ ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 44Hz ರಿಫ್ರೆಶ್ ರೇಟ್‌ ಜೊತೆಗೆ 5,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್‌ 7000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸಪೋರ್ಟ್‌ ಜೊತೆಗೆ 68W ಟರ್ಬೊಪವರ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿರುವುದು ಪ್ರಮುಖ ಹೈಲೈಟ್‌ ಆಗಿದೆ.

ಇನ್ನು ಮೊಟೊರೊಲಾ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್‌ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYT-710 ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 13MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್‌ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಫೋನ್ ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ ಸಪೋರ್ಟ್‌ ಜೊತೆಗೆ ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo