Motorola Edge 70 Fusion India Launch date specifications and Price check more details
ಮೊಟೊರೊಲಾ ಕಂಪನಿಯ ಮುಂಬರುವ Motorola Edge 70 Fusion ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕುತೂಹಲ ಮೂಡಿಸಿದೆ. ಈ ಮೊಬೈಲ್ ಅಧಿಕೃತ ಬಿಡುಗಡೆ ದಿನಾಂಕವನ್ನು ಕಂಪನಿಯು ಈಗ ಬಹಿರಂಗಪಡಿಸಿದೆ. ಇನ್ನು ಈ ಫೋನ್ ಲಾಂಚ್ ಕುರಿತಾಗಿ ಫ್ಲಿಪ್‌ಕಾರ್ಟ್ ತಾಣದಲ್ಲಿ ಮೈಕ್ರೋಪೇಜ್ ಕೂಡಾ ತೆರೆಯಲಾಗಿದೆ. ಎಡ್ಜ್ 70 ಫ್ಯೂಷನ್ ಫೋನ್ ಮೊಟೊ AI ಬೆಂಬಲಿತ 50MP ಸೋನಿ LYT-710 ಮುಖ್ಯ ಸೆನ್ಸಾರ್ ಪಡೆದಿರುವುದು ಪ್ರಮುಖ ಹೈಲೈಟ್ ಅಂಶಗಳಲ್ಲಿ ಒಂದಾಗಿದೆ. ಹಾಗೆಯೇ Snapdragon 7s Gen 3 SoC ಪ್ರೊಸೆಸರ್ ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ 32MP ಸೆಲ್ಫಿ ಕ್ಯಾಮೆರಾ ರಚನೆ ಪಡೆದಿರಲಿದೆ ಎನ್ನಲಾಗಿದೆ. ಹಾಗಾದರೆ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಫೋನಿನ ನಿರೀಕ್ಷಿತ ಫೀಚರ್ಸ್ ಸೇರಿದಂತೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಶೀಘ್ರದಲ್ಲೇ iQOO Z11x ಬಿಡುಗಡೆ! ನಿರೀಕ್ಷಿತ ಫೀಚರ್ಸ್ ಹಾಗೂ ಬೆಲೆ ಮಾಹಿತಿ ನೋಡಿ
ಮೊಟೊ ಸಂಸ್ಥೆಯು ಮೊಟೊರೊಲಾ ಎಡ್ಜ್ 70 ಸರಣಿಯಲ್ಲಿ ಪರಿಚಯಿಸಲಿರುವ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಫೋನ್ ಇದೇ ಮಾರ್ಚ್ 6 ರಂದು ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಆಗಲಿದೆ. ಬಿಡುಗಡೆ ಬಳಿಕ ಈ ಫೋನ್ ಫ್ಲಿಪ್‌ಕಾರ್ಟ್, ಮೊಟೊರೊಲಾ ವೆಬ್‌ಸೈಟ್ ಮತ್ತು ಪ್ರಮುಖ ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಇದು ಪ್ಯಾಂಟೋನ್ ಸಿಲೂಯೆಟ್, ಪ್ಯಾಂಟೋನ್ ಬ್ಲೂ ಸರ್ಫ್ ಮತ್ತು ಪ್ಯಾಂಟೋನ್ ಕಂಟ್ರಿ ಏರ್ ಕಲರ್ ಆಯ್ಕೆ ಪಡೆದಿರಬಹುದು ಎನ್ನಲಾಗಿದೆ. ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಕಂಪನಿಯು ಹೊರಹಾಕಿಲ್ಲ.
ಮೊಟೊರೊಲಾದ ಮುಂಬರುವ ಈ ಹೊಸ ಫೋನ್ 6.78 ಇಂಚಿನ ಕ್ವಾಡ್ ಕರ್ವ್ OLED ಮಾದರಿಯ ಡಿಸ್‌ಪ್ಲೇ ಹೊಂದಿರಲಿದೆ. ಹಾಗೆಯೇ ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಒಳಗೊಂಡಿರುವ ನಿರೀಕ್ಷೆಗಳಿವೆ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ನಿಂದ ರಕ್ಷಿಣೆ ಪಡೆದಿರಲಿದೆ ಎನ್ನಲಾಗಿದೆ. ಅಲ್ಲದೇ ಈ ಫೋನ್ Snapdragon 7s Gen 3 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರಬಹುದು ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ Hello UI ಸಪೋರ್ಟ್ ಜೊತೆಗೆ ಇತ್ತೀಚಿನ ಆಂಡ್ರಾಯ್ಡ್ 16 OS ನಲ್ಲಿ ರನ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ.
ಹಾಗೆಯೇ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್ ವಿಶ್ವದ ಮೊದಲ 50MP ಸೋನಿ LYT-710 ಸೆನ್ಸಾರ್ ಪಡೆದಿರುವ ಸಾಧ್ಯತೆಗಳು ಇವೆ. ಇದರೊಂದಿಗೆ ಸೆಕೆಂಡರಿ ಕ್ಯಾಮೆರಾವು 13MP ಅಲ್ಟ್ರಾ ವೈಡ್ ಸೆನ್ಸಾರ್ ಒಳಗೊಂಡಿರಲಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸುವ ಸೂಚನೆಗಳು ಇವೆ. ಅಂದಹಾಗೆ ಎಲ್ಲಾ ಕ್ಯಾಮೆರಾಗಳಿಗೆ 4K ಸಪೋರ್ಟ್ ಇರಲಿದೆ ಎನ್ನಲಾಗಿದೆ. ಇನ್ನು ಈ ಫೋನ್ 7000 mAh ಬ್ಯಾಟರಿ ಸಪೋರ್ಟ್ ಜೊತೆಗೆ 68W ಟರ್ಬೊ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ.