Motorola Edge 70 Fusion ಸ್ಮಾರ್ಟ್‌ಫೋನ್‌ ಈಗ 512GB ವೇರಿಯಂಟ್‌ನಲ್ಲಿ ಲಭ್ಯ! ಬೆಲೆ ನೋಡಿ

HIGHLIGHTS

ಮೊಟೊರೊಲಾ ಎಡ್ಜ್ 70 ಫ್ಯೂಷನ್ ಈಗ ಹೊಸ ವೇರಿಯಂಟ್‌ನಲ್ಲಿ ಲಭ್ಯ

ಮೊಟೊರೊಲಾ ಎಡ್ಜ್ 70 ಫ್ಯೂಷನ್ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ

ಮೊಟೊರೊಲಾದ ಈ ಫೋನ್‌ ಮುಂಭಾಗದಲ್ಲಿ 32MP ಸೆಲ್ಫಿ ಕ್ಯಾಮೆರಾ ಹೊಂದಿದೆ

Motorola Edge 70 Fusion ಸ್ಮಾರ್ಟ್‌ಫೋನ್‌ ಈಗ 512GB ವೇರಿಯಂಟ್‌ನಲ್ಲಿ ಲಭ್ಯ! ಬೆಲೆ ನೋಡಿ

Motorola ಮೊಬೈಲ್‌ ಕಂಪನಿಯ Motorola Edge 70 Fusion ಮೊಬೈಲ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಕಂಪನಿಯು ಈ ಮೊಬೈಲ್‌ನಲ್ಲಿ 12GB RAM + 512GB ಸ್ಟೋರೇಜ್‌ನ ಹೊಸ ವೇರಿಯಂಟ್‌ ಅನ್ನು ಬಿಡುಗಡೆ ಮಾಡಿದೆ. ಅಂದಹಾಗೆ ಈ ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದ್ದು ಇದರೊಂದಿಗೆ 50MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಜೊತೆಗೆ 68W ಟರ್ಬೊಪವರ್ ಚಾರ್ಜಿಂಗ್‌ ಸಪೋರ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಆಕರ್ಷಕ ಕಲರ್‌ ಆಯ್ಕೆಗಳಲ್ಲಿ ಲಭ್ಯ. ಹಾಗಾದರೆ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ನ ಫೀಚರ್ಸ್‌ ಹಾಗೂ ಬೆಲೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 16GB RAM ಒಳಗೊಂಡ Google Pixel 10 Pro ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!

Motorola Edge 70 Fusion ಹೊಸ ವೇರಿಯಂಟ್‌ ಬೆಲೆ ಮಾಹಿತಿ

ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ ಈಗ ಹೊಸ ವೇರಿಯಂಟ್‌ನಲ್ಲಿ ಬಿಡುಗಡೆ ಆಗಿದೆ. ಹೊಸ 12GB RAM + 512GB ಸ್ಟೋರೇಜ್‌ ವೇರಿಯಂಟ್‌ 36,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್‌ ಈಗ 8GB + 256GB ಹಾಗೂ 12GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಸಿಗುತ್ತದೆ. ಅಂದಹಾಗೆ ಹೊಸ ವೇರಿಯಂಟ್‌ ಇದೇ ಮೇ 1 ರಿಂದ ಅಮೆಜಾನ್ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್‌ ಪ್ಯಾಂಟೋನ್ ಸಿಲೂಯೆಟ್, ಪ್ಯಾಂಟೋನ್ ಬ್ಲೂ ಸರ್ಫ್ ಮತ್ತು ಪ್ಯಾಂಟೋನ್ ಓರಿಯಂಟ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

MOTOROLA Edge 70 Fusion

ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ ಫೀಚರ್ಸ್‌

ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ 6.78 ಇಂಚಿನ 1.5K ಕ್ವಾಡ್ ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 44Hz ರಿಫ್ರೆಶ್ ರೇಟ್‌ ಜೊತೆಗೆ 5,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸಪೋರ್ಟ್‌ ಜೊತೆಗೆ 68W ಟರ್ಬೊಪವರ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

ಹಾಗೆಯೇ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್‌ ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ LYT-710 ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 13MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್‌ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಫೋನ್ ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ ಸಪೋರ್ಟ್‌ ಜೊತೆಗೆ ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile