ಮೊಟೊರೊಲಾ ಮೊಬೈಲ್ ಕಂಪನಿಯು ಇತ್ತೀಚಿಗೆ ಲಾಂಚ್ ಮಾಡಿರುವ Motorola Edge 70 Fusion ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನಿನ ಮಾರಾಟ ಇಂದು (ಮಾರ್ಚ್ 12 ರಿಂದ) ಪ್ರಾರಂಭವಾಗಲಿದೆ. ಈ ಮೊಬೈಲ್ Snapdragon 7s Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಒಳಗೊಂಡಿರುವ ಜೊತೆಗೆ 7000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ನೂತನ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಸ್ಮಾರ್ಟ್‌ಫೋನ್ ಸೇಲ್, ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ Xiaomi 17 ಬಿಡುಗಡೆ! ಇದು ಟ್ರಿಪಲ್ 50MP ಕ್ಯಾಮೆರಾ ಒಳಗೊಂಡ ಫ್ಲ್ಯಾಗ್‌ಶಿಪ್ ಫೋನ್
ಮೊಟೊರೊಲಾ ಕಂಪನಿಯ ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್ ಇಂದು (ಮಾರ್ಚ್ 12 ರಿಂದ) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಮೊಬೈಲ್‌ನ 8GB + 256GB ಸ್ಟೋರೇಜ್ ವೇರಿಯಂಟ್ 26,999 ರೂಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 12GB + 256GB ಸ್ಟೋರೇಜ್ ವೇರಿಯಂಟ್ ಮಾಡೆಲ್ 32,999 ರೂಗಳ ಬೆಲೆಯಲ್ಲಿ ಸಿಗಲಿದೆ. ಇನ್ನು ಈ ಮೊಬೈಲ್ ಮೂರು ಕಲರ್ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಆಗಿವೆ. ಆಸಕ್ತ ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಹಾಗೂ Motorola.in ವೆಬ್‌ಸೈಟ್ ಮೂಲಕ ಖರೀದಿಸಬಹುದು.
ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್ 6.78 ಇಂಚಿನ 1.5K ಕ್ವಾಡ್ ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 44Hz ರಿಫ್ರೆಶ್ ರೇಟ್ ಜೊತೆಗೆ 5,200 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್ 7000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸಪೋರ್ಟ್ ಜೊತೆಗೆ 68W ಟರ್ಬೊಪವರ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿರುವುದು ಪ್ರಮುಖ ಹೈಲೈಟ್ ಆಗಿದೆ.
ಇನ್ನು ಮೊಟೊರೊಲಾ ಎಡ್ಜ್ 70 ಫ್ಯೂಷನ್ ಮೊಬೈಲ್ ಇದರ ಮೊದಲ ಕ್ಯಾಮೆರಾವು 50MP ಸೋನಿ LYT-710 ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 13MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಫೋನ್ ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ ಸಪೋರ್ಟ್ ಜೊತೆಗೆ ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ.