Motorola Edge 70 with Snapdragon 7 Gen 4 chip launched in India Price Camera Battery display all details
ಭಾರತದಲ್ಲಿ ಇಂದು ಮೋಟೋರೋಲ ತನ್ನ ಹೊಚ್ಚ ಹೊಸ ಪ್ರೀಮಿಯಂ ಶ್ರೇಣಿಯ Motorola Edge 70 5G ಸ್ಮಾರ್ಟ್ಫೋನ್ ಅನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸ್ಮಾರ್ಟ್ಫೋನ್ ಪ್ರಸ್ತುತ ಪ್ರತ್ಯೇಕವಾಗಿ ಫ್ಲಿಪ್ಕಾರ್ಟ್ ಮೂಲಕ ಲಭ್ಯವಿದ್ದು ಅನೇಕ ಇಂಟ್ರೆಸ್ಟಿಂಗ್ ಮತ್ತು ಪ್ರೀಮಿಯಂ ಫೀಚರ್ಗಳೊಂದಿಗೆ ಪ್ಯಾಕ್ ಮಾಡಲಾಗಿದೆ. ಈ ಸ್ಮಾರ್ಟ್ಫೋನ್ ಖರೀದಿಸುವ ಮುಂಚೆ ಇದರ ವಿಶೇಷತೆಗಳನ್ನು ನೋಡುವುದಾದರೆ ಇದರಲ್ಲಿ 50MP ಸೇಲ್ಫಿ ಕ್ಯಾಮೆರಾ, 5000mAh ಬ್ಯಾಟರಿಯೊಂದಿಗೆ Snapdragon 7s Gen 4 ಚಿಪ್ ಸಪೋರ್ಟ್ ಮಾಡುವುದರೊಂದಿಗೆ Dolby Atmos ಡ್ಯೂಯಲ್ ಸ್ಪೀಕರ್ ಹೊಂದಿದೆ. ಹೆಚ್ಚುವರಿಯಾಗಿ Motorola Edge 70 ಒಂದೇ ಒಂದು ಮಾದರಿಯನ್ನು ₹28,999 ರೂಗಳಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಪರಿಚಯಿಸಿದೆ.
Also Read: Jio Happy New Year 2026 Plans: ರಿಲಯನ್ಸ್ ಜಿಯೋ 3 ಹೊಸ ಹ್ಯಾಪಿ ನ್ಯೂ ಇಯರ್ ಪ್ಲಾನ್‌ಗಳನ್ನು ಪರಿಚಯಿಸಿದೆ!
Motorola Edge 70 ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಒಂದೇ ಒಂದು ರೂಪಾಂತದರಲ್ಲಿ Flipakrt ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹29,999 ರೂಗಳಿಗೆ ಪರಿಚಯಿಸಲಾಗಿದೆ. ಆದರೆ ಆಸಕ್ತ ಬಳಕೆದಾರರು ಇದನ್ನು ಆಯ್ದ ಬ್ಯಾಂಕ್ ಕಾರ್ಡ್ ಬಳಸಿಕೊಂಡು ಸುಮಾರು 1000 ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ Motorola Edge 70 ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಸುಮಾರು 28,999 ರೂಗಳ ವರೆಗೆ ಕಡಿಮೆ ಬೆಲೆಯಲ್ಲಿ ಖರೀದಿಗೆ ಪ್ರಯತ್ನಿಸಬಹುದು. ಈ Motorola Edge 70 ಸ್ಮಾರ್ಟ್ಫೋನ್ 23ನೇ ಡಿಸೆಂಬರ್ 2025 ರಂದು ಫ್ಲಿಪ್ಕಾರ್ಟ್ ಮೊಟೋರೋಲ ಸೈಟ್ ಮೂಲಕ ಮೊದಲ ಮಾರಾಟಕ್ಕೆ ಲಭ್ಯವಾಗಲಿದೆ.
ಈ Motorola Edge 70 ಸ್ಮಾರ್ಟ್ಫೋನ್ 6.7 ಇಂಚಿನ Extreme AMOLED (2712 x 1220 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಹೊಂದಿದೆ. Motorola Edge 70 ಸ್ಮಾರ್ಟ್ಫೋನ್ ಕಾಮೆರದ ಬಗ್ಗೆ ಹೇಳುವುದಾದರೆ ಇದರಲ್ಲಿ 50MP ಪ್ರೈಮರಿ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಮತ್ತೊಂದು 50MP ಅಲ್ಟ್ರಾ ವೈಡ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 50MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
ಈ Motorola Edge 70 ಸ್ಮಾರ್ಟ್ಫೋನ್ Snapdragon® 7 Gen 4 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಜೊತೆಗೆ ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, AGPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ Motorola Edge 70 ಸ್ಮಾರ್ಟ್ಫೋನ್ 5000mAh ಬ್ಯಾಟರಿಯನ್ನು ಪ್ಯಾಕ್ ಮಾಡುವುದರೊಂದಿಗೆ 68W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಕಂಪನಿ ಇದರಲ್ಲಿ 3 ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು 4 ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.