ಜಬರ್ದಸ್ತ್ ಬ್ಯಾಟರಿ ಬ್ಯಾಕ್‌ಅಪ್ ಇರುವ Motorola Edge 70 Max ಮೊಬೈಲ್ ಬೆಲೆಯಲ್ಲಿ ಇಳಿಕೆ!
ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಫೋನಿಗೆ ಆಕರ್ಷಕ ಆಫರ್
ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ 7,100mAh ಬ್ಯಾಟರಿ ಸೌಲಭ್ಯ ಹೊಂದಿದೆ
ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಸ್ಮಾರ್ಟ್‌ಫೋನ್ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ
Flipkart Big Bang Diwali Sale: ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 70 Max ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 7,100mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : PF ಖಾತೆದಾರರಿಗೆ ಗುಡ್‌ನ್ಯೂಸ್: ಇನ್ಮುಂದೆ WhatsApp ಮೂಲಕವೇ ಬ್ಯಾಲೆನ್ಸ್ ಮತ್ತು ಪಾಸ್‌ಬುಕ್ ಮಾಹಿತಿ
Motorola Edge 70 Max ಈಗ ಡಿಸ್ಕೌಂಟ್‌ನಲ್ಲಿ ಲಭ್ಯ
ಪ್ರೀಮಿಯಂ ರೇಂಜ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 89,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 54,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಪ್ಯಾಂಟೋನ್ ಆಕ್ವಾ ಗ್ರೇ, ಪ್ಯಾಂಟೋನ್ ಡಾರ್ಕ್ ಶ್ಯಾಡೋ ಮತ್ತು ಪ್ಯಾಂಟೋನ್ ಐಸ್ ಮೆಲ್ಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.

ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ ಫೀಚರ್ಸ್
ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ 6.8 ಇಂಚಿನ QHD+ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 7,000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ ಹಲೋ UI ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 ಸೆನ್ಸಾರ್ ಅನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,100mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 25W ವೈರ್‌ಲೆಸ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
