ಲೀಡಿಂಗ್ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾದ ಮೊಟೊರೊಲಾ ಇದೀಗ Motorola Edge 70 Max ಮೊಬೈಲ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗಿದೆ. ಕಂಪನಿಯ ಈ ಮೊಬೈಲ್ ಇಂದು (ಜುಲೈ 15 ರಂದು) ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಆಗಲಿದೆ. ಮುಂಬರುವ ಈ ಮೊಬೈಲ್‌ನ ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಫೋನಿನ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಅಲ್ಲದೇ 50 ಮೆಗಾಪಿಕ್ಸಲ್ ಕ್ಯಾಮೆರಾ ಒಳಗೊಂಡಿರುವ ಜೊತೆಗೆ 32 ಮೆಗಾಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಹಾಗಾದರೆ ಮುಂಬರುವ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್‌ನ ಲಾಂಚ್ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ದೇಶೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗುತ್ತಿದೆ Redmi Turbo 6 ಸ್ಮಾರ್ಟ್‌ಫೋನ್ ಸರಣಿ!
ಮೊಟೊರೊಲಾ ಸಂಸ್ಥೆಯ ಹೊಸ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಲಾಂಚ್ ಮಾಡಲು ಸಕಲ ಸಜ್ಜಾಗಿದೆ. ಅಂದಹಾಗೆ ಈ ನೂತನ ಸ್ಮಾರ್ಟ್‌ಫೋನ್ ಅನ್ನು ಇಂದು (ಜುಲೈ 15 ರಂದು) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಅಧಿಕೃತವಾಗಿ ಪರಿಚಯಿಸಲಾಗುವುದು ಎಂದು ಸಂಸ್ಥೆಯು ತಿಳಿಸಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಮೊಬೈಲ್ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಲಾಂಚ್ ಬಳಿಕ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಸೇಲ್ ಪ್ರಾರಂಭಿಸಲಿದೆ. ಅಂದಹಾಗೆ ಈ ಫೋನ್ ನಾಲ್ಕು ಪ್ಯಾಂಟೋನ್ (ಇಂಪೆನೆಟ್ರಬಲ್, ನಾಟಿಕಲ್ ಬ್ಲೂ, ಫ್ಯೂಷಿಯಾ ರೆಡ್ ಮತ್ತು ಲಾರೆಲ್ ಗ್ರೀನ್) ಕಲರ್ ಆಯ್ಕೆಯನ್ನು ಒಳಗೊಂಡಿರಲಿದೆ.
ಮುಂಬರುವ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಫೋನ್ Quad HD+ LTPO ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಜೊತೆಗೆ 7,000 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಹಾಗೆಯೇ ಇದರ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದಿರಲಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 8 ಜನ್ 5 SoC ಚಿಪ್‌ಸೆಟ್ ಪ್ರೊಸೆಸರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ ಹೈ ಎಂಡ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದೆ.
ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿರುವ ಸೂಚನೆಗಳು ಇವೆ. ಈ ಫೋನಿನ 7,100mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ 90W ಫಾಸ್ಟ್ ಚಾರ್ಜರ್ ಸೌಲಭ್ಯ ಪಡೆದಿರಲಿದೆ. ಅಲ್ಲದೇ 25W ವೈರಲೆಸ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಪಡೆದಿರಲಿದೆ. ಇದು ಫ್ಲಾಟ್-ಎಡ್ಜ್ ಲುಕ್ ಅನ್ನು ಒಳಗೊಂಡಿರಲಿದ್ದು, ಸ್ಕ್ವೇರ್ ಕ್ಯಾಮೆರಾ ಮಾಡ್ಯೂಲ್ ಪಡೆದಿರಲಿದೆ. ಇದಲ್ಲದೆ ಈ ಫೋನ್ ಅಲ್ಯೂಮಿನಿಯಂ ಫ್ರೇಮ್ ಮತ್ತು ಪ್ರೀಮಿಯಂ ಲುಕ್ ಪಡೆದಿರಲಿದೆ.