Motorola Edge 70 Max launched in India and the price and features
ಪ್ರಮುಖ ಮೊಬೈಲ್ ಕಂಪನಿಗಳ ಪೈಕಿ ಒಂದಾದ ಮೊಟೊರೊಲಾ ಸಂಸ್ಥೆಯ ಇತ್ತೀಚಿಗೆ ಹೊಸದಾಗಿ ಬಿಡುಗಡೆ ಮಾಡಿರುವ Motorola Edge 70 Max ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಜುಲೈ 20 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಸೇಲ್ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಒಳಗೊಂಡಿರುವ ಜೊತೆಗೆ 7,100mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಪಡೆದಿದೆ. ಅಲ್ಲದೇ ಈ ಮೊಬೈಲ್ ಪ್ಯಾಂಟೋನ್ ಆಕ್ವಾ ಗ್ರೇ, ಪ್ಯಾಂಟೋನ್ ಡಾರ್ಕ್ ಶ್ಯಾಡೋ ಮತ್ತು ಪ್ಯಾಂಟೋನ್ ಐಸ್ ಮೆಲ್ಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್‌ನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ದೇಶೀಯ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪನಿಯ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ ನಾಳೆ (ಜುಲೈ 20 ರಿಂದ) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್ ವೇರಿಯಂಟ್ 54,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 12GB + 256GB ಸ್ಟೋರೇಜ್‌ನ ಟಾಪ್ ಎಂಡ್ ವೇರಿಯಂಟ್ 59,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಪ್ಯಾಂಟೋನ್ ಆಕ್ವಾ ಗ್ರೇ, ಪ್ಯಾಂಟೋನ್ ಡಾರ್ಕ್ ಶ್ಯಾಡೋ ಮತ್ತು ಪ್ಯಾಂಟೋನ್ ಐಸ್ ಮೆಲ್ಟ್ ಆಗಿವೆ. ಈ ಫೋನ್ ಫ್ಲಿಪ್‌ಕಾರ್ಟ್ ಸೇರಿದಂತೆ ಪ್ರಮುಖ ರಿಟೇಲ್ ಸ್ಟೋರ್ ಮೂಲಕ ಸೇಲ್‌ಗೆ ಬರಲಿದೆ.
ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಮೊಬೈಲ್ 6.8 ಇಂಚಿನ QHD+ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 7,000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 12GB + 256GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ ಹಲೋ UI ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಮೊಟೊರೊಲಾ ಎಡ್ಜ್ 70 ಮ್ಯಾಕ್ಸ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 ಸೆನ್ಸಾರ್ ಅನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,100mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 25W ವೈರ್‌ಲೆಸ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.