ಮೊಟೊ ಸಂಸ್ಥೆಯ ಹೊಸ Motorola Edge 70 Pro ಮೊಬೈಲ್ ಇಂದು (ಏಪ್ರಿಲ್ 22 ರಂದು) ಅಧಿಕೃತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದೆ. ಮುಂಬರುವ ಈ ಮೊಬೈಲ್‌ನ ಕೆಲವು ಫೀಚರ್ಸ್ ಈಗಾಗಲೇ ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸಿವೆ. ಮುಖ್ಯವಾಗಿ ಈ ಸ್ಮಾರ್ಟ್‌ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಅಲ್ಲದೇ ಇದು ಪ್ರಮುಖ ಹೈಲೈಟ್ ಎನಿಸಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡುವುದು ಪಕ್ಕಾ ಎನ್ನಲಾಗಿದೆ. ಹಾಗಾದರೆ ಮುಂಬರುವ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್‌ನ ಲಾಂಚ್ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : BSNL ಗ್ರಾಹಕರೇ ಗಮನಿಸಿ! 485 ರೂ.ಗಳ ಪ್ಲಾನ್‌ನಲ್ಲಿ 72 ದಿನಗಳ ವ್ಯಾಲಿಡಿಟಿ
ಮೊಟೊ ಕಂಪನಿಯು ತನ್ನ ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್ 70 ಪ್ರೊ ಲಾಂಚ್ ಮಾಡಲು ಸಕಲ ರೆಡಿಯಾಗಿದೆ. ಅಂದಹಾಗೆ ಈ ನೂತನ ಮೊಬೈಲ್ ಅನ್ನು ಇಂದು (ಏಪ್ರಿಲ್ 22 ರಂದು) ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಮೊಬೈಲ್‌ನ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಲಾಂಚ್ ಬಳಿಕ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ಈ ಫೋನ್ ಪ್ಯಾಂಟೋನ್ ಟೀ, ಪ್ಯಾಂಟೋನ್ ಟೈಟಾನ್ ಮತ್ತು ಪ್ಯಾಂಟೋನ್ ಲಿಲಿ ವೈಟ್ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿರಲಿದೆ.
ಮೊಟೊರೊಲಾ ಎಡ್ಜ್ 70 ಪ್ರೊ ಸ್ಮಾರ್ಟ್‌ಫೋನ್ 6.8 ಇಂಚಿನ 1.5K ರೆಸಲ್ಯೂಶನ್ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಗಳು ಇವೆ. ಹಾಗೆಯೇ ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಸಪೋರ್ಟ್ ಜೊತೆಗೆ 5,200 nits ಬ್ರೈಟ್ನೆಸ್ ಬೆಂಬಲ ಹೊಂದಿರಲಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 90W ಟರ್ಬೊಪವರ್ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿರುವ ಸಾಧ್ಯತೆಗಳು ಇವೆ.
ಹಾಗೆಯೇ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್ ಹಿಂಭಾಗದಲ್ಲಿ 50MP ಸೋನಿ LYT-710 ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆ. ಹಾಗೆಯೇ ಮುಂಭಾಗದಲ್ಲಿನ ಕ್ಯಾಮೆರಾವು ಸಹ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇರುವ ನಿರೀಕ್ಷೆಗಳು ಇವೆ. ಇದು ಹಲೋ UI ಜೊತೆಗೆ Android 16 ಓಎಸ್ ಸಪೋರ್ಟ್ ಒಳಗೊಂಡಿರಲಿದೆ. ಅಲ್ಲದೇ ಈ ಫೋನ್ 12GB RAM ವರೆಗೂ ಆಯ್ಕೆ ಹೊಂದಿರಲಿದೆ.