ಸದ್ದಿಲ್ಲದೆ ಭಾರತದಲ್ಲಿ Motorola Edge 70 Pro ಮೊಬೈಲ್ ಬಿಡುಗಡೆ! ಬೆಲೆ ಹಾಗೂ ಫೀಚರ್ಸ್
ಮೊಟೊದ ಈ ಫೋನ್ ಇದೇ ಏಪ್ರಿಲ್ 29 ರಂದು ಭಾರತದಲ್ಲಿ ಸೇಲ್ ಆರಂಭಿಸಲಿದೆ
ಮೊಟೊರೊಲಾ ಎಡ್ಜ್ 70 ಪ್ರೊ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ
ಮೊಟೊರೊಲಾ ಎಡ್ಜ್ 70 ಪ್ರೊ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ
ಜನಪ್ರಿಯ ಮೊಟೊರೊಲಾ ಕಂಪನಿಯ ಬಹುನಿರೀಕ್ಷಿತ Motorola Edge 70 Pro ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 22 ರಂದು) ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಆಗಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಎಕ್ಸ್‌ಟ್ರೀಮ್ ಪ್ರೊಸೆಸರ್ ಸೌಲಭ್ಯವನ್ನು ಹೊಂದಿದೆ. ಇದರೊಂದಿಗೆ ಈ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 50 ಮೆಗಾಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒಳಗೊಂಡಿದೆ. ಈ ಫೋನ್ ಪ್ಯಾಂಟೋನ್ ಲಿಲ್ಲಿ ವೈಟ್, ಪ್ಯಾಂಟೋನ್ ಟೀ ಮತ್ತು ಪ್ಯಾಂಟೋನ್ ಟೈಟಾನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಈ ಫೋನಿನ ಡಿಸ್‌ಪ್ಲೇ 144Hz ವರೆಗೆ ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗಾದರೆ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್‌ನ ಬೆಲೆ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಮುಂದೆ ನೋಡೋಣ ಬನ್ನಿರಿ.
SurveyAlso Read : BSNL ಗ್ರಾಹಕರೇ ಗಮನಿಸಿ! 485 ರೂ.ಗಳ ಪ್ಲಾನ್‌ನಲ್ಲಿ 72 ದಿನಗಳ ವ್ಯಾಲಿಡಿಟಿ
Motorola Edge 70 Pro ಬೆಲೆ, ಆಫರ್ ಮತ್ತು ಲಭ್ಯತೆಯ ಮಾಹಿತಿ
ನೂತನ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳಲ್ಲಿ ಬಿಡುಗಡೆ ಆಗಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ಆವೃತ್ತಿಯ ಬೆಲೆ 38,999 ರೂ.ಗಳು ಆಗಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 41,999 ರೂ.ಗಳು ಆಗಿದೆ. ಅಲ್ಲದೇ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಹಾಗೂ ಆಯ್ದ ಬ್ಯಾಂಕ್‌ಗಳ ರಿಯಾಯಿತಿ ಪ್ರಯೋಜನ ಸಹ ಪಡೆಯಬಹುದು. ಅಂದಹಾಗೆ ಈ ಫೋನ್ ಇದೇ ಏಪ್ರಿಲ್ 29 ರಂದು ಭಾರತದಲ್ಲಿ ಸೇಲ್ ಆರಂಭಿಸಲಿದೆ. ಇನ್ನು ಈ ಫೋನ್ ಪ್ಯಾಂಟೋನ್ ಲಿಲ್ಲಿ ವೈಟ್, ಪ್ಯಾಂಟೋನ್ ಟೀ ಮತ್ತು ಪ್ಯಾಂಟೋನ್ ಟೈಟಾನ್ ಕಲರ್ ಆಯ್ಕೆ ಪಡೆದುಕೊಂಡಿದೆ.

ಮೊಟೊರೊಲಾ ಎಡ್ಜ್ 70 ಪ್ರೊ ಫೀಚರ್ ಮತ್ತು ಇತರೆ ಆಯ್ಕೆಗಳು
ಮೊಟೊ ಸಂಸ್ಥೆಯ ಈ ನೂತನ ಫೋನ್ 6.8 ಇಂಚಿನ ಸೂಪರ್ HD ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 1,272×2,772 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 144Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 5,200 nits ಸೌಲಭ್ಯ ನೀಡಲಾಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಎಕ್ಸ್‌ಟ್ರೀಮ್ ಪ್ರೊಸೆಸರ್ ಪವರ್ ಜೊತೆಗೆ Android 16 ಓಎಸ್ ಸಪೋರ್ಟ್ ಒಳಗೊಂಡಿದೆ. ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68+IP69 ರೇಟಿಂಗ್ ಸೌಲಭ್ಯ ಪಡೆದಿದೆ.
ಹಾಗೆಯೇ ಈ ನೂತನ ಮೊಟೊರೊಲಾ ಎಡ್ಜ್ 70 ಪ್ರೊ ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿ ಇದ್ದು, ತೃತೀಯ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಅಲ್ಲದೇ ಈ ಫೋನ್ 6,500mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿದ್ದು, 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 5W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile