Motorola G37 Power 5G Phone gets price drop on Flipkart deal
ಇ ಕಾಮರ್ಸ್ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ Motorola g37 Power ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ g37 ಪವರ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Phone ಕಳೆದುಹೋದರೆ ಬ್ಯಾಂಕ್ ಖಾತೆಯಿಂದ ಹಣ ಹೋಗದಂತೆ ತಡೆಯಲು ಹೀಗೆ ಮಾಡಿ
ಬಜೆಟ್ ದರ ಹಾಗೂ ಉತ್ತಮ ಫೀಚರ್ಸ್ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ಮೊಟೊರೊಲಾ g37 ಪವರ್ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 26,499 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 16,129 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಮೊಟೊರೊಲಾ g37 ಪವರ್ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಮೊಟೊರೊಲಾ G37 ಪವರ್ ಮೊಬೈಲ್ 6.7 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದ್ದು ಇದರ ಸ್ಕ್ರೀನ್ 1604 x 720 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಜೊತೆಗೆ 1050 nits ಬ್ರೈಟ್‌ನೆಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಒಳಗೊಂಡಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 8GB + 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ವಿಸ್ತರಿಸಬಹುದು.
ಮೊಟೊರೊಲಾ G37 ಪವರ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 30W ಟರ್ಬೋಚಾರ್ಜಿಂಗ್ ಹಾಗೂ 6W ರಿವರ್ಸ್ ಚಾರ್ಜಿಂಗ್ ಬೆಂಬಲ ಹೊಂದಿದೆ.
Disclosure: This Article Contains Affiliate Links