ಇತ್ತೀಚಿನ Motorola G37 Power ಮೊಬೈಲ್‌ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಖರೀದಿಗೆ ಬೆಸ್ಟ್‌ ಟೈಮ್‌

HIGHLIGHTS

ಮೊಟೊರೊಲಾ G37 ಪವರ್‌ ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ಮೊಟೊರೊಲಾ ಈ ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ರಿಯಲ್‌ಮಿಯ ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6400 ಪ್ರೊಸೆಸರ್‌ ಹೊಂದಿದೆ

ಮೊಟೊರೊಲಾ ಕಂಪನಿಯ Motorola G37 Power ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಪ್ಯಾಂಟೋನ್ ನಾಟಿಕಲ್ ಬ್ಲೂ, ಪ್ಯಾಂಟೋನ್ ಇಂಪೆನೆಟ್ರೇಬಲ್ ಮತ್ತು ಪ್ಯಾಂಟೋನ್ ಕ್ಯಾಪ್ರಿ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ G37 ಪವರ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Google Pixel 9a ಮೊಬೈಲ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಭರ್ಜರಿ ಆಫರ್‌ ಲಭ್ಯ

Motorola G37 Power ಬೆಲೆಯಲ್ಲಿ ಭರ್ಜರಿ ಕಡಿತ

ಬಜೆಟ್‌ ಬೆಲೆಯ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊರೊಲಾ G37 ಪವರ್‌ ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 26,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 14,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಬ್ಯಾಂಕ್‌ ಆಫರ್‌ ಹಾಗೂ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಪ್ಯಾಂಟೋನ್ ನಾಟಿಕಲ್ ಬ್ಲೂ, ಪ್ಯಾಂಟೋನ್ ಇಂಪೆನೆಟ್ರೇಬಲ್ ಮತ್ತು ಪ್ಯಾಂಟೋನ್ ಕ್ಯಾಪ್ರಿ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

ಮೊಟೊರೊಲಾ G37 ಪವರ್‌ ಮೊಬೈಲ್‌ ಫೀಚರ್ಸ್‌

ಮೊಟೊರೊಲಾ G37 ಪವರ್‌ ಮೊಬೈಲ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದ್ದು ಇದರ ಸ್ಕ್ರೀನ್ 1604 x 720 ಪಿಕ್ಸೆಲ್‌ ರೆಸಲ್ಯೂಶನ್ ಒಳಗೊಂಡಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಜೊತೆಗೆ 1050 nits ಬ್ರೈಟ್‌ನೆಸ್ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಒಳಗೊಂಡಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 8GB + 128GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ವಿಸ್ತರಿಸಬಹುದು.

ಮೊಟೊರೊಲಾ G37 ಪವರ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದ್ದು, ದ್ವಿತೀಯ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 30W ಟರ್ಬೋಚಾರ್ಜಿಂಗ್ ಹಾಗೂ 6W ರಿವರ್ಸ್ ಚಾರ್ಜಿಂಗ್‌ ಸಪೋರ್ಟ್‌ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :