ಸ್ಟೈಲಿಶ್‌ ಲುಕ್‌ ಇರುವ Motorola g57 power ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!

HIGHLIGHTS

ಮೊಟೊರೊಲಾ g57 ಪವರ್‌ 5G ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ

ಮೊಟೊರೊಲಾ g57 ಪವರ್‌ 5G ಮೊಬೈಲ್‌ 50MP ಕ್ಯಾಮೆರಾ ರಚನೆ ಅನ್ನು ಪಡೆದಿದೆ

ಮೊಟೊರೊಲಾ ಸಂಸ್ಥೆಯ ಈ ಫೋನ್‌ Snapdragon 6s gen 4 ಪ್ರೊಸೆಸರ್‌ ಹೊಂದಿದೆ

ಪ್ರಸ್ತುತ ಇ ಕಾಮರ್ಸ್‌ ತಾಣದ ಮೂಲಕ ಆಫರ್‌ನಲ್ಲಿ ಹೊಸ ಫೋನ್‌ ಖರೀದಿಸುವ ಯೋಚನೆ ಇದ್ದರೆ, ಫ್ಲಿಪ್‌ಕಾರ್ಟ್‌ ಅತ್ಯುತ್ತಮ ತಾಣ ಎನಿಸುತ್ತದೆ. ಏಕೆಂದರೆ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ Motorola ಸಂಸ್ಥೆಯ Motorola g57 power 5G ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಮೊಟೊರೊಲಾದ ಈ ಮೊಬೈಲ್‌ 7000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಇದು Snapdragon 6s gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಮೊಟೊರೊಲಾ g57 ಪವರ್‌ 5G ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : Jio 999 ರೂ.ಗಳ ಪ್ಲಾನ್‌: ಇದು ಬಜೆಟ್‌ ಬೆಲೆಯಲ್ಲಿ ಬೊಂಬಾಟ್‌ ಯೋಜನೆ

Motorola g57 power 5G ಬೆಲೆಯಲ್ಲಿ ಸಖತ್ ಇಳಿಕೆ

ಜನಪ್ರಿಯ ಮೊಟೊರೊಲಾ g57 ಪವರ್‌ 5G ಮೊಬೈಲ್‌ ಸದ್ಯ Flipkart ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 8GB RAM + 128 GB ವೇರಿಯಂಟ್‌ 17,999 ರೂಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 14,999 ರೂಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಅಂದಹಾಗೆ ಈ ಫೋನ್‌ Pantone Regatta, Pantone Fluidity ಮತ್ತು Pantone Corsair ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Motorola g57 power 5G ಫೋನ್‌ ಫೀಚರ್ಸ್‌

Motorola g57 power 5G ಮೊಬೈಲ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ ಪುಲ್‌ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ Snapdragon 6s gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ Motorola g57 power 5G ಮೊಬೈಲ್‌ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 8MP ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಪನೋರಮಾ, ಪೋರ್ಟ್ರೇಟ್, ಪ್ರೊ ವೀಡಿಯೊ, ಸಿಂಗಲ್ ಟೇಕ್, ಸ್ಲೋ ಮೋಷನ್ ಆಯ್ಕೆಗಳು ಇವೆ. ಹಾಗೆಯೇ ಈ ಫೋನ್‌ 7,000mAh ಬ್ಯಾಟರಿ ಜೊತೆಗೆ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :