ಸ್ಟೈಲಿಶ್‌ ಲುಕ್‌ ಇರುವ Motorola g57 power ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

HIGHLIGHTS

ಮೊಟೊರೊಲಾ g57 ಪವರ್‌ ಫೋನಿಗೆ ಅಮೆಜಾನ್‌ನಲ್ಲಿ ಬಿಗ್ ಆಫರ್‌

ಮೊಟೊರೊಲಾ g57 ಪವರ್ ಮೊಬೈಲ್‌ 50MP ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ

ಮೊಟೊರೊಲಾದ ಈ ಫೋನ್ Snapdragon 6s gen 4 ಪ್ರೊಸೆಸರ್‌ ಪಡೆದುಕೊಂಡಿದೆ

ಸ್ಟೈಲಿಶ್‌ ಲುಕ್‌ ಇರುವ Motorola g57 power ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಬಜೆಟ್‌ ದರದಲ್ಲಿ ಆಕರ್ಷಕ ಮೊಬೈಲ್‌ ಖರೀದಿ ಮಾಡಲು ಯೋಚಿಸಿದ್ದಿರಾ? ಹಾಗಿದ್ರೆ ಅಮೆಜಾನ್‌ ಪ್ಲಾಟ್‌ಫಾರ್ಮ್‌ನತ್ತ ನೋಡಿ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊ ಸಂಸ್ಥೆಯ Motorola g57 power ಮೊಬೈಲ್‌ ಸಖತ್ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಮೊಟೊರೊಲಾ ಸಂಸ್ಥೆಯ ಈ ಮೊಬೈಲ್‌ Snapdragon 6s gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ g57 ಪವರ್ ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಇಂದಿನಿಂದ Poco C81 ಮತ್ತು Poco C81x ಖರೀದಿಗೆ ಲಭ್ಯ! ಕಡಿಮೆ ಬೆಲೆಗೆ ಲಭ್ಯ

Motorola g57 power ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ

ಮೊಟೊರೊಲಾ g57 ಪವರ್ ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆ 17,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 16,160 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್‌ Pantone Regatta, Pantone Fluidity ಮತ್ತು Pantone Corsair ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಖರೀದಿಸಬಹುದಾಗಿದೆ.

Motorola g57 power

Motorola g57 power 5G ಮೊಬೈಲ್‌ ಫೀಚರ್ಸ್‌

Motorola g57 power 5G ಫೋನ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ ಪುಲ್‌ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ Snapdragon 6s gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ Motorola g57 power 5Gಮೊಬೈಲ್‌ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 8MP ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಪನೋರಮಾ, ಪೋರ್ಟ್ರೇಟ್, ಪ್ರೊ ವೀಡಿಯೊ, ಸಿಂಗಲ್ ಟೇಕ್, ಸ್ಲೋ ಮೋಷನ್ ಆಯ್ಕೆಗಳು ಇವೆ. ಹಾಗೆಯೇ ಈ ಫೋನ್‌ 7000mAh ಬ್ಯಾಟರಿ ಜೊತೆಗೆ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo