12GB RAM ಇರುವ Motorola G67 Power ಖರೀದಿಗೆ ಇದುವೇ ಬೆಸ್ಟ್‌ ಟೈಮ್‌! ಬೆಲೆಯಲ್ಲಿ ಭರ್ಜರಿ ಇಳಿಕೆ

HIGHLIGHTS

ಮೊಟೊರೊಲಾ G67 ಪವರ್ ಫೋನ್‌ ಈಗ ಭಾರೀ ರಿಯಾಯಿತಿಯಲ್ಲಿ ಲಭ್ಯ

ಮೊಟೊರೊಲಾದ ಈ ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ

ಮೊಟೊರೊಲಾದ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s Gen 2 ಪ್ರೊಸೆಸರ್‌ ಹೊಂದಿದೆ

12GB RAM ಇರುವ Motorola G67 Power ಖರೀದಿಗೆ ಇದುವೇ ಬೆಸ್ಟ್‌ ಟೈಮ್‌! ಬೆಲೆಯಲ್ಲಿ ಭರ್ಜರಿ ಇಳಿಕೆ

ಪ್ರಮುಖ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಇದೀಗ ಫ್ರೀಡಂ ಸೇಲ್‌ ಘೋಷಿಸಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola G67 Power ಸ್ಮಾರ್ಟ್‌ಫೋನ್‌ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s Gen 2 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊ G67 ಪವರ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 8,000mAh ಬ್ಯಾಟರಿ ಒಳಗೊಂಡ OnePlus Nord CE6 ಬೆಲೆಯಲ್ಲಿ ಭರ್ಜರಿ ಇಳಿಕೆ! ಈ ಚಾನ್ಸ್‌ ಬಿಡಬೇಡಿ

Motorola G67 Power ದರದಲ್ಲಿ ಸಖತ್ ಇಳಿಕೆ

ಆಕರ್ಷಕ ಪ್ರೈಸ್‌ಟ್ಯಾಗ್‌ ಹಾಗೂ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಮೊಟೊರೊಲಾ G67 ಪವರ್ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 30,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 27,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು.

Motorola G67 Power 5G with massive 7000mAh Battery phone first sale 12 November
Moto G67 Power 5G

ಮೊಟೊರೊಲಾ G67 ಪವರ್ 5G ಫೀಚರ್ಸ್‌ ಮಾಹಿತಿ

ಮೊಟೊರೊಲಾ G67 ಪವರ್ 5G ಫೋನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 6.7 ಇಂಚಿನ ಪೂರ್ಣ HD+ LCD ಡಿಸ್ಪ್ಲೇಯನ್ನು ಪಡೆದಿದ್ದು ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ನಿಂದ ರಕ್ಷಿಸಲಾಗಿದೆ. ಫೋನ್ ಕ್ವಾಡ್ ಪಿಕ್ಸೆಲ್ ತಂತ್ರಜ್ಞಾನದೊಂದಿಗೆ ಉತ್ತಮ ಗುಣಮಟ್ಟದ ಸೋನಿ LYT-600 ಸೆನ್ಸರ್ ಬಳಸುತ್ತದೆ. ಈ ಮುಖ್ಯ ಕ್ಯಾಮೆರಾವು ವಿಸ್ತಾರವಾದ ಶಾಟ್‌ಗಳಿಗಾಗಿ 8MP ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಟು-ಇನ್-ಒನ್ ಫ್ಲಿಕರ್ ಸೆನ್ಸಾರ್‌ ಪೂರಕವಾಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s Gen 2 ಚಿಪ್‌ಸೆಟ್ ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿದೆ.

ಮೊಟೊರೊಲಾ G67 ಪವರ್ ಫೋನ್‌ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 32MP ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಎಲ್ಲಾ ಮೂರು ಕ್ಯಾಮೆರಾಗಳು 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತವೆ. ಅಲ್ಲದೇ 7,000mAh ಸಿಲಿಕಾನ್-ಕಾರ್ಬನ್ ಬ್ಯಾಟರಿ ಒಂದೇ ಚಾರ್ಜ್‌ನಲ್ಲಿ 58 ಗಂಟೆಗಳವರೆಗೆ ಬಳಕೆಯನ್ನು ನೀಡುತ್ತದೆ. 30W ವೈರ್ಡ್ ಫಾಸ್ಟ್ ಚಾರ್ಜಿಂಗ್‌ನಿಂದ ಬೆಂಬಲಿತವಾಗಿದೆ. ಫೋನ್ MIL-STD-810H ಮಿಲಿಟರಿ-ದರ್ಜೆಯ ಬಾಳಿಕೆ ಮತ್ತು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಸಹ ಹೊಂದಿದೆ. ಇದು ಅದರ ದೃಢವಾದ ನಿರ್ಮಾಣ ಗುಣಮಟ್ಟವನ್ನು ಪೂರ್ಣಗೊಳಿಸುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile