Motorola G96 5G ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಡಿಸ್ಕೌಂಟ್‌! ಈ ಆಫರ್‌ ಬಿಡಬೇಡಿ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ G96 5G ದರದಲ್ಲಿ ಭಾರೀ ಕಡಿತ

ಮೊಟೊರೊಲಾ G96 5G ಫೋನ್‌ 7,000mAh ಬ್ಯಾಟರಿ ಪವರ್‌ ಹೊಂದಿದೆ

ಮೊಟೊರೊಲಾ G96 5G ಮೊಬೈಲ್‌ ಮೂರು ಆಕರ್ಷಕ ಕಲರ್‌ ಆಯ್ಕೆಗಳನ್ನು ಹೊಂದಿದೆ

Motorola G96 5G ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಡಿಸ್ಕೌಂಟ್‌! ಈ ಆಫರ್‌ ಬಿಡಬೇಡಿ

ಮೊಬೈಲ್‌ ಮಾರುಕಟ್ಟೆಯಲ್ಲಿ Motorola G96 5G ಸ್ಮಾರ್ಟ್‌ಫೋನ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಆಕರ್ಷಕ ಫೀಚರ್ಸ್‌ ಜೊತೆಗೆ ಇದು ಬಜೆಟ್‌ ದರದಲ್ಲಿ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ಇದೀಗ Motorola G96 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಘೋಷಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಮೊಟೊರೊಲಾ ಸಂಸ್ಥೆಯ ಈ ಮೊಬೈಲ್‌ Snapdragon 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 5,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ G96 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ OnePlus Nord 6 ಸ್ಮಾರ್ಟ್‌ಫೋನ್‌ ಬಿಡುಗಡೆ! ಪವರ್‌ಫುಲ್‌ ಫೀಚರ್ಸ್‌

Motorola G96 5G ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌

ಮೊಟೊರೊಲಾ ಕಂಪನಿಯ ಮೊಟೊರೊಲಾ G96 5G ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 8GB RAM + 128GB ವೇರಿಯಂಟ್‌ ಬೆಲೆ 20,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 18,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ Pantone Cattleya Orchid, Pantone Ashleigh Blue ಮತ್ತು Pantone Greener Pastures ಆಗಿವೆ.

motorola g96 5g

ಮೊಟೊರೊಲಾ G96 5G ಮೊಬೈಲ್‌ ಫೀಚರ್ಸ್‌

ಮೊಟೊರೊಲಾ G96 5G ಫೋನ್‌ 144Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ 3D ಕರ್ವ್ಡ pOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ Snapdragon 7s Gen 2 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ಮೊಟೊರೊಲಾ G96 5G ಮೊಬೈಲ್‌ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್‌ ಪಡೆದಿದೆ. ಚಲನೆಯಲ್ಲಿರುವಾಗ ಸ್ಪಷ್ಟ ಫೋಟೋ ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸೌಲಭ್ಯ ಸಹ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 32MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 5,500mAh ಬ್ಯಾಟರಿ ಜೊತೆಗೆ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo