ಲೀಡಿಂಗ್ ಇ ಕಾಮರ್ಸ್ ವೆಬ್‌ಸೈಟ್‌ಗಳು ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಡಿಸ್ಕೌಂಟ್ ಘೋಷಿಸುತ್ತವೆ. ಈ ನಿಟ್ಟಿನಲ್ಲಿ ಅನೇಕರು ಗ್ರಾಹಕರು ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳತ್ತ ಗಮನ ನೀಡುತ್ತಾರೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೊಟೊರೊಲಾ ಸಂಸ್ಥೆಯ Motorola G96 5G ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಮೊಟೊರೊಲಾದ ಈ ಮೊಬೈಲ್ 5,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ Snapdragon 7s Gen 2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೊಟೊರೊಲಾ G96 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : ಸೈಲೆಂಟ್ ಆಗಿ ದೇಸಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Samsung Galaxy A37 5G ಮೊಬೈಲ್
ಜನಪ್ರಿಯ ಮೊಟೊರೊಲಾ G96 5G ಸ್ಮಾರ್ಟ್‌ಫೋನ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ವೇರಿಯಂಟ್ ಬೆಲೆ 20,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 18,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್ Pantone Cattleya Orchid, Pantone Ashleigh Blue ಮತ್ತು Pantone Greener Pastures ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಮೊಟೊರೊಲಾ G96 5G ಫೋನ್ 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ 3D ಕರ್ವ್ಡ pOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Snapdragon 7s Gen 2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ಮೊಟೊರೊಲಾ G96 5G ಮೊಬೈಲ್ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್ ಪಡೆದಿದೆ. ಚಲನೆಯಲ್ಲಿರುವಾಗ ಸ್ಪಷ್ಟ ಫೋಟೋ ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸೌಲಭ್ಯ ಸಹ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 5,500mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.