Motorola ಮೊಬೈಲ್ ಕಂಪನಿಯು G ಸರಣಿಯ ಇತ್ತೀಚಿನ ಕೆಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಗಮನ ಸೆಳೆದಿವೆ. ಆ ಪೈಕಿ Motorola G96 5G ಮೊಬೈಲ್ ಸಹ ಸೇರಿದೆ. ಬಜೆಟ್ ಪ್ರೈಸ್‌ಟ್ಯಾಗ್ ವಿಭಾಗದಲ್ಲಿ ಕಾಣಿಸಿಕೊಂಡಿರುವ ಈ ಸ್ಮಾರ್ಟ್‌ಫೋನ್ ಇದೀಗ ಸಖತ್ ಬೆಲೆ ಇಳಿಕೆ ಪಡೆದಿದ್ದು ಇನ್ನಷ್ಟು ಅಗ್ಗದ ದರದಲ್ಲಿ ಖರೀದಿಗೆ ಲಭ್ಯ ಇದೆ. ಹೌದು ಇ ಕಾಮರ್ಸ್ ಪ್ಲಾಟ್‌ಫಾರ್ಮ್ Flipkart ನಲ್ಲಿ ಮೊಟೊರೊಲಾ ಸಂಸ್ಥೆಯ Motorola G96 5G ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಅಲ್ಲದೇ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಮೂಲಕ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ Snapdragon 7s Gen 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. Flipkart ಇ ಕಾಮರ್ಸ್ ತಾಣದಲ್ಲಿ Motorola G96 5G ಫೋನಿಗೆ ಲಭ್ಯ ಇರುವ ಆಫರ್ ಬೆಲೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Airtel ಟೆಲಿಕಾಂನ ಈ ಪ್ಲಾನ್ ರೀಚಾರ್ಜ್ ಮಾಡಿದ್ರೆ ಡೇಟಾ ಟೆನ್ಷನ್ ಇರಲ್ಲ!
Motorola G96 5G ಮೊಬೈಲ್ ಬೊಂಬಾಟ್ ಬೆಲೆ ಇಳಿಕೆ ಕಂಡಿದೆ. Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಈ ಮೊಬೈಲ್‌ನ 8 GB RAM + 128 GB ವೇರಿಯಂಟ್ 20,999 ರೂಗಳ ಪ್ರೈಸ್‌ಟ್ಯಾಗ್ ಪಡೆದಿದ್ದು, ಆದರೆ ಪ್ರಸ್ತುತ 17,999 ರೂಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಪಡೆಯಬಹುದು. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಭಿನ್ನ EMI ಆಯ್ಕೆಗಳನ್ನು ಪಡೆಯಬಹುದು. ಇನ್ನು ಈ ಫೋನ್ Pantone Cattleya Orchid, Pantone Ashleigh Blue ಮತ್ತು Pantone Greener Pastures ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
Motorola G96 5G ಫೋನ್ 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ 3D ಕರ್ವ್ಡ pOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Snapdragon 7s Gen 2 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ Motorola G96 5G ಮೊಬೈಲ್ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್ ಪಡೆದಿದೆ. ಚಲನೆಯಲ್ಲಿರುವಾಗ ಸ್ಪಷ್ಟ ಫೋಟೋ ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸೌಲಭ್ಯ ಸಹ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 5,500mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.