Motorola Razr 60 Ultra ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಬೊಂಬಾಟ್‌ ಡಿಸ್ಕೌಂಟ್‌!

HIGHLIGHTS

ಅಮೆಜಾನ್‌ನಲ್ಲಿ ಮೊಟೊರೊಲಾ ರೇಜರ್ 60 ಅಲ್ಟ್ರಾ ಫೋನ್‌ ಬೆಲೆ ಇಳಿಕೆ

ಮೊಟೊರೊಲಾ ಸಂಸ್ಥೆಯ ಈ ಮೊಬೈಲ್‌ 50MP ಕ್ಯಾಮೆರಾ ಪಡೆದುಕೊಂಡಿದೆ

ಮೊಟೊರೊಲಾದ ಈ ಫೋನ್‌ Snapdragon 8 Elite ಪ್ರೊಸೆಸರ್‌ ಅನ್ನು ಒಳಗೊಂಡಿದೆ

Motorola Razr 60 Ultra ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಬೊಂಬಾಟ್‌ ಡಿಸ್ಕೌಂಟ್‌!

ಹೈ ಎಂಡ್ ಮಾದರಿಯ ಮಡಚುವ (foldable) ಸ್ಮಾರ್ಟ್‌ಫೋನ್‌ ಖರೀದಿಸಲು ಯೋಚನೆ ಪ್ಲಾನ್‌ ಇದ್ದರೆ ಇಲ್ಲಿ ಗಮನಿಸಿ. ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಇದೀಗ Motorola Razr 60 Ultra ಸ್ಮಾರ್ಟ್‌ಫೋನ್‌ ಸಖತ್ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಆಯ್ದ ಬ್ಯಾಂಕ್‌ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್‌ ಕ್ವಾಲ್ಕಮ್‌ನ Snapdragon 8 Elite SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದ್ದು, ಹಾಗೆಯೇ 50MP ಸೌಲಭ್ಯದ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನುಳಿದಂತೆ Amazon ವೆಬ್‌ಸೈಟ್‌ನಲ್ಲಿ ಮೊಟೊರೊಲಾ ರೇಜರ್ 60 ಅಲ್ಟ್ರಾ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಟೆಲಿಕಾಂನ ಈ ಕಡಿಮೆ ಬೆಲೆಯ ಪ್ಲಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಜೊತೆಗೆ 105GB ಡೇಟಾ

Motorola Razr 60 Ultra ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ಫೋಲ್ಡೆಬಲ್‌ ಮಾದರಿ ಹೊಂದಿರುವ ಮೊಟೊರೊಲಾ ಎಡ್ಜ್ 60 ಫ್ಯೂಷನ್‌ 5G ಮೊಬೈಲ್‌ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ 16 GB RAM + 512 GB ವೇರಿಯಂಟ್‌ 1,09,000 ರೂಗಳ ಬೆಲೆಯನ್ನು ಹೊಂದಿದ್ದು, ಆದರೆ ಪ್ರಸ್ತುತ ಅಮೆಜಾನ್‌ನಲ್ಲಿ 79,999 ರೂಗಳ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ PANTONE Rio Red ಹಾಗೂ PANTONE Scarab ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Motorola Razr 60 Ultra

ಮೊಟೊರೊಲಾ ರೇಜರ್ 60 ಅಲ್ಟ್ರಾ ಫೀಚರ್ಸ್‌ ಹೀಗಿವೆ

ಮೊಟೊರೊಲಾ ರೇಜರ್ 60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಮುಖ್ಯ ಡಿಸ್‌ಪ್ಲೇಯು 6.96 ಇಂಚಿನ LTPO pOLED ಮಾದರಿಯಲ್ಲಿ ಇದ್ದು, ಇದರ ಕವರ್‌ ಡಿಸ್‌ಪ್ಲೇಯು 4 ಇಂಚಿನ LTPO AMOLED ಮಾದರಿಯಲ್ಲಿ ಇದೆ. ಮೇನ್‌ ಡಿಸ್‌ಪ್ಲೇ 4,500 nits ಹಾಗೂ ಕವರ್‌ ಡಿಸ್‌ಪ್ಲೇ 3,000 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್‌ Snapdragon 8 Elite SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್‌ 16GB RAM + 512GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ.

ಹಾಗೆಯೇ ಮೊಟೊರೊಲಾ ರೇಜರ್ 60 ಅಲ್ಟ್ರಾ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದ್ದು, ದ್ವಿತೀಯ ಕ್ಯಾಮೆರಾವು 50MP ಅಲ್ಟ್ರಾ ವೈಡ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 4,700mAh ಬ್ಯಾಟರಿ ಜೊತೆಗೆ 68W ವೈರ್ಡ್, 30W ವೈರ್‌ಲೆಸ್ ಹಾಗೂ 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ ಬೆಂಬಲ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo