ನೀವೇನಾದರೂ ಭರ್ಜರಿ ಆಫರ್‌ನಲ್ಲಿ ಮಡಚುವ (foldable) ಮಾದರಿಯ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ಅದಕ್ಕೆ ಈಗ ಅತ್ಯುತ್ತಮ ಸಮಯ. ಹೌದು ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್‌ನಲ್ಲಿ ಇದೀಗ Motorola Razr 60 Ultra ಸ್ಮಾರ್ಟ್‌ಫೋನ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಆಯ್ದ ಬ್ಯಾಂಕ್ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ ಕ್ವಾಲ್ಕಮ್‌ನ Snapdragon 8 Elite SoC ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದ್ದು, ಹಾಗೆಯೇ 50MP ಸೌಲಭ್ಯದ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನುಳಿದಂತೆ Amazon ವೆಬ್‌ಸೈಟ್‌ನಲ್ಲಿ Motorola Razr 60 Ultra ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi Plans: ಕಡಿಮೆ ಬೆಲೆಯ ಈ ಪ್ಲಾನ್‌ಗಳಲ್ಲಿ Unlimited Data ಜೊತೆಗೆ ಜಬರ್ದಸ್ತ್ ವ್ಯಾಲಿಡಿಟಿ
Motorola Razr 60 Ultra ಮೊಬೈಲ್ ಇದೀಗ Amazon ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 16 GB RAM + 512 GB ವೇರಿಯಂಟ್ 1,09,000 ರೂಗಳ ಬೆಲೆಯನ್ನು ಹೊಂದಿದ್ದು, ಆದರೆ ಪ್ರಸ್ತುತ ಅಮೆಜಾನ್‌ನಲ್ಲಿ 79,999 ರೂಗಳ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಮೊಬೈಲ್ ಖರೀದಿಸುವ ಗ್ರಾಹಕರು HDFC ಬ್ಯಾಂಕ್, IDFC First ಬ್ಯಾಂಕ್ ಹಾಗೂ Kotak ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚುವರಿ ಡಿಸ್ಕೌಂಟ್ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು.
Motorola Razr 60 Ultra ಮೊಬೈಲ್ ಮುಖ್ಯ ಡಿಸ್‌ಪ್ಲೇಯು 6.96 ಇಂಚಿನ LTPO pOLED ಮಾದರಿಯಲ್ಲಿ ಇದ್ದು, ಇದರ ಕವರ್ ಡಿಸ್‌ಪ್ಲೇಯು 4 ಇಂಚಿನ LTPO AMOLED ಮಾದರಿಯಲ್ಲಿ ಇದೆ. ಮೇನ್ ಡಿಸ್‌ಪ್ಲೇ 4,500 nits ಹಾಗೂ ಕವರ್ ಡಿಸ್‌ಪ್ಲೇ 3,000 nits ವರೆಗೆ ಗರಿಷ್ಠ ಬ್ರೈಟ್ನೆಸ್ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್ Snapdragon 8 Elite SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ 16GB RAM + 512GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ.
ಅದೇ ರೀತಿ Motorola Razr 60 Ultra ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು, ದ್ವಿತೀಯ ಕ್ಯಾಮೆರಾವು 50MP ಅಲ್ಟ್ರಾ ವೈಡ್ ಸೆನ್ಸಾರ್ ಹೊಂದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 4,700mAh ಬ್ಯಾಟರಿ ಜೊತೆಗೆ 68W ವೈರ್ಡ್, 30W ವೈರ್‌ಲೆಸ್ ಹಾಗೂ 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಪಡೆದಿದೆ.