Motorola Signature Price Drop over Rs 8000 on Amazon deal is worth buying motorola phone
Motorola ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ Motorola Signature ಸ್ಮಾರ್ಟ್‌ಫೋನ್ ಪ್ರೀಮಿಯಂ ಮಾದರಿಯಲ್ಲಿದೆ. ತನ್ನ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಈ ಸ್ಟೈಲಿಶ್ ಸ್ಮಾರ್ಟ್‌ಫೋನ್ ಅಧಿಕೃತ Flipkart ಇ ಕಾಮರ್ಸ್ ವೆಬ್‌ಸೈಟ್ ಮೂಲಕ ಇಂದು (ಜನವರಿ 30 ರಂದು) ಮಧ್ಯಾಹ್ನ 12 ಗಂಟೆಗೆ ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಗ್ರಾಹಕರಿಗೆ ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸೌಲಭ್ಯ ಲಭ್ಯ ಇದೆ. ಅಂದಹಾಗೆ ಈ ಮೊಬೈಲ್ 5,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗಾದರೆ Motorola Signature ಬೆಲೆ ಎಷ್ಟು ಹಾಗೂ ಆಫರ್ ಏನು ಎನ್ನುವುದನ್ನು ಮುಂದೆ ತಿಳಿಯೋಣ.
Also Read : Airtel ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ! ಉಚಿತವಾಗಿ ಸಿಗಲಿದೆ 4,000 ರೂಗಳ Adobe Express ಚಂದಾದಾರಿಕೆ!
Motorola Signature ಮೊಬೈಲ್ ಇಂದು Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಶುರು ಮಾಡಲಿದೆ. ಈ ಫೋನಿನ 12GB RAM + 256GB ವೇರಿಯಂಟ್ ಬೆಲೆ ರೂ. 59,999 ಆಗಿದ್ದರೆ ಇದರ 16GB RAM + 512GB ವೇರಿಯಂಟ್ ಬೆಲೆ ರೂ. 64,999 ಆಗಿದೆ. ಅದೇ ರೀತಿ 16GB RAM + 1TB ವೇರಿಯಂಟ್ ದರವು ರೂ. 69,999 ಆಗಿದೆ. ಖರೀದಿದಾರರು HDFC ಬ್ಯಾಂಕ್ ಮತ್ತು Axis ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 5,000 ರೂ.ಗಳ ಇನ್‌ಸ್ಟಂಟ್ ಡಿಸ್ಕೌಂಟ್ ಪಡೆಯಬಹುದಾಗಿದೆ. ಅಲ್ಲದೇ 5,000 ರೂ.ಗಳ ವರೆಗೆ ಎಕ್ಸ್‌ಚೇಂಜ್ ಬೋನಸ್ ಪ್ರಯೋಜನ ಸಹ ಪಡೆಯಬಹುದು. ಇನ್ನು ಈ ಫೋನ್ ಪ್ಯಾಂಟೋನ್ ಕಾರ್ಬನ್ ಹಾಗೂ ಪ್ಯಾಂಟೋನ್ ಮಾರ್ಟಿನಿ ಆಲಿವ್ ಕಲರ್ ಆಯ್ಕೆ ಪಡೆದುಕೊಂಡಿದೆ.
ಮೊಟೊ ಸಂಸ್ಥೆಯ ಈ ನೂತನ ಫೋನ್ 6.8 ಇಂಚಿನ Super HD AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 1,264×2,780 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 165Hz ವರೆಗೆ refresh rate ಹೊಂದಿದ್ದು 6,200 nits ಸೌಲಭ್ಯ ನೀಡಲಾಗಿದೆ. ಈ ಫೋನ್ Snapdragon 8 Gen 5 chipset ಪ್ರೊಸೆಸರ್ ಪವರ್ ಜೊತೆಗೆ Android 16 ಓಎಸ್ ಸಪೋರ್ಟ್ ಒಳಗೊಂಡಿದೆ. Motorola Signature ಮೊಬೈಲ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಸಹ 50 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿ ಇವೆ. ಇನ್ನು ಸೆಲ್ಫಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ.
ಮೊಟೊ ಕಂಪನಿಯ Motorola Signature ಫೋನ್ 5,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು ಇದಕ್ಕೆ ಅನುಗುಣವಾಗಿ ಆಗಿ 90W ವೈರ್ಡ್ ಮತ್ತು 50W ವೈರ್ಲೆಸ್ ಫಾಸ್ಟ್ ಚಾರ್ಜಿಂಗ್ ಹೊಂದಿದೆ. ಅಲ್ಲದೇ ಈ ಫೋನ್ 41 ಗಂಟೆಗಳ ಬ್ಯಾಟರಿ ಬ್ಯಾಕ್‌ಅಪ್ ಒದಗಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇದರೊಂದಿಗೆ ಈ ಫೋನ್ 5W ವೈರ್ಡ್ ರಿವರ್ಸ್ ಚಾರ್ಜಿಂಗ್ ಮಾಡುವ ವ್ಯವಸ್ಥೆಯ ಸೌಲಭ್ಯ ಸಹ ಹೊಂದಿದೆ. ಉಳಿದಂತೆ ಇದು 5G, 4G LTE, Wi-Fi 7, ಬ್ಲೂಟೂತ್ 6.0, USB ಟೈಪ್-C ಪೋರ್ಟ್, GPS ಸಪೋರ್ಟ್ ಸಹ ಪಡೆದಿದೆ.