Digit.in

ಸ್ಟೈಲಿಶ್‌ ಡಿಸೈನ್‌ ಹೊಂದಿರುವ Motorola Signature ಮೊಬೈಲ್‌ ಖರೀದಿಗೆ ಇದುವೇ ಸಕಾಲ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಸಿಗ್ನೇಚರ್ ಫೋನಿಗೆ ಬಿಗ್ ಡಿಸ್ಕೌಂಟ್‌

ಮೊಟೊರೊಲಾ ಸಿಗ್ನೇಚರ್ ಮೊಬೈಲ್‌ 5,200mAh ಬ್ಯಾಟರಿ ಪಡೆದಿದೆ

ಮೊಟೊರೊಲಾ ಸಿಗ್ನೇಚರ್ ಮೊಬೈಲ್‌ ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಸ್ಟೈಲಿಶ್‌ ಡಿಸೈನ್‌ ಹೊಂದಿರುವ Motorola Signature ಮೊಬೈಲ್‌ ಖರೀದಿಗೆ ಇದುವೇ ಸಕಾಲ!

ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಿದೆ. ಆ ಪೈಕಿ Motorola Signature ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ನಲ್ಲಿ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಸಿಗ್ನೇಚರ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Motorola Signature ಈಗ ಆಫರ್‌ನಲ್ಲಿ ಲಭ್ಯ

ಪ್ರಿಮಿಯಂ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಮೊಟೊರೊಲಾ ಸಿಗ್ನೇಚರ್ ಮೊಬೈಲ್‌ ಫ್ಲಿಪ್‌ಕಾರ್ಟ್‌ನಲ್ಲಿ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 12GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 74,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಪ್ಯಾಂಟೋನ್ ಕಾರ್ಬನ್ ಹಾಗೂ ಪ್ಯಾಂಟೋನ್ ಮಾರ್ಟಿನಿ ಆಲಿವ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ಮೊಟೊರೊಲಾ ಸಿಗ್ನೇಚರ್ ಫೀಚರ್ ಹೀಗಿವೆ

ಮೊಟೊರೊಲಾ ಸಿಗ್ನೇಚರ್ 6.8 ಇಂಚಿನ Super HD AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 1,264x2,780 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 165Hz ವರೆಗೆ refresh rate ಹೊಂದಿದ್ದು 6,200 nits ಸೌಲಭ್ಯ ನೀಡಲಾಗಿದೆ. ಈ ಫೋನ್ Snapdragon 8 Gen 5 chipset ಪ್ರೊಸೆಸರ್‌ ಪವರ್ ಜೊತೆಗೆ Android 16 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಮೊಟೊರೊಲಾ Signature ಮೊಬೈಲ್‌ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಉಳಿದೆರಡು ಕ್ಯಾಮೆರಾಗಳು ಸಹ 50 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿ ಇವೆ. ಇನ್ನು ಸೆಲ್ಫಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇದು 8K/30 fps ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡುವ ಸೌಲಭ್ಯ ಪಡೆದಿದೆ.

ಮೊಟೊರೊಲಾ ಸಿಗ್ನೇಚರ್ ಫೋನ್ 5,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು ಇದಕ್ಕೆ ಸಪೋರ್ಟಿವ ಆಗಿ 90W ವೈರ್ಡ್ ಮತ್ತು 50W ವೈರ್ಲೆಸ್ ಫಾಸ್ಟ್ ಚಾರ್ಜಿಂಗ್‌ ಹೊಂದಿದೆ. ಅಂದಹಾಗೆ ಈ ಫೋನ್ 41 ಗಂಟೆಗಳ ಬ್ಯಾಟರಿ ಬ್ಯಾಕ್‌ಅಪ್‌ ಒದಗಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇದರೊಂದಿಗೆ ಇದು 5W ವೈರ್ಡ್ ರಿವರ್ಸ್ ಚಾರ್ಜಿಂಗ್ ಮಾಡುವ ವ್ಯವಸ್ಥೆಯ ಆಯ್ಕೆ ಹೊಂದಿದೆ. ಉಳಿದಂತೆ ಇದು ಇದು 5G, 4G LTE, Wi-Fi 7, ಬ್ಲೂಟೂತ್ 6.0, USB ಟೈಪ್-C ಪೋರ್ಟ್, GPS ಸಪೋರ್ಟ್ ಸಹ ಪಡೆದಿದೆ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile