ವಿಭಿನ್ನ ಲುಕ್‌ ಹೊಂದಿರುವ Nothing Phone 4a ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ನಥಿಂಗ್‌ ಫೋನ್‌ 4a ಮೊಬೈಲ್‌ಗೆ ಬಿಗ್ ಆಫರ್‌

ನಥಿಂಗ್‌ ಫೋನ್‌ 4a ಮೊಬೈಲ್‌ 5,400mAh ಬ್ಯಾಟರಿ ಸೌಲಭ್ಯ ಪಡೆದಿದೆ

ನಥಿಂಗ್‌ ಫೋನ್‌ 4a ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ನಥಿಂಗ್ ಕಂಪನಿಯ Nothing Phone 4a ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ Snapdragon 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 5,400mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ನಥಿಂಗ್‌ ಫೋನ್‌ 4a ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Nothing Phone 4a ಸಖತ್ ಡಿಸ್ಕೌಂಟ್‌ನಲ್ಲಿ ಲಭ್ಯ

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ನಥಿಂಗ್‌ ಫೋನ್‌ 4a ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 49,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 35,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಬ್ಲ್ಯಾಕ್, ಬ್ಲೂ, ಪಿಂಕ್ ಮತ್ತು ವೈಟ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Nothing Phone 4a

ನಥಿಂಗ್‌ ಫೋನ್‌ 4a ಫೀಚರ್ಸ್‌ ಮಾಹಿತಿ

ನಥಿಂಗ್‌ ಫೋನ್‌ 4a ಸ್ಮಾರ್ಟ್‌ಫೋನ್‌ 6.78 ಇಂಚಿನ LTPS ಫ್ಲೆಕ್ಸಿಬಲ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್‌ ಜೊತೆಗೆ 4,500 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್‌ Snapdragon 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP64 ರೇಟಿಂಗ್‌ ಸೌಲಭ್ಯ ಒಳಗೊಂಡಿದೆ. ಈ ಫೋನ್ ಹೊಸ ಗ್ಲಿಫ್ ಬಾರ್ ಇಂಟರ್ಫೇಸ್ ಅನ್ನು ಸಹ ಪಡೆದುಕೊಂಡಿದೆ.

ಹಾಗೆಯೇ ಈ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು OIS ಬೆಂಬಲಿತ 50MP ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 50MP ಪೆರಿಸ್ಕೋಪ್ ಸೆನ್ಸಾರ್‌ ಹಾಗೂ 8MP ಅಲ್ಟ್ರಾವೈಡ್ ಸೆನ್ಸಾರ್‌ ಸಪೋರ್ಟ್‌ ಪಡೆದಿವೆ. ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 5,400mAh ಬ್ಯಾಟರಿಯನ್ನು ಹೊಂದಿದ್ದು ಇದಕ್ಕೆ ಪೂರಕವಾಗಿ 50W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile