Nothing Phone 4b
ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿರುವ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ನಥಿಂಗ್ ಕಂಪನಿಯ Nothing Phone 4b ಸ್ಮಾರ್ಟ್‌ಫೋನ್ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ನಥಿಂಗ್ ಫೋನ್ 4b ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Jio ಕಂಪನಿಯ 1199 ರೂ.ಗಳ ರೀಚಾರ್ಜ್ ಪ್ಲಾನ್‌ನಲ್ಲಿ ಅಧಿಕ ಡೇಟಾ ಸೌಲಭ್ಯ!
ಆಕರ್ಷಕ ಫೀಚರ್ಸ್ ಹಾಗೂ ಸ್ಟೈಲಿಶ್ ಲುಕ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ನಥಿಂಗ್ ಫೋನ್ 4b ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 54,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 31,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಆಗಿವೆ.
ನಥಿಂಗ್ ಫೋನ್ 4b ಸ್ಮಾರ್ಟ್‌ಫೋನ್ 6.77 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 2,000 ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ ನಥಿಂಗ್ ಓಎಸ್ 4.1 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ನಥಿಂಗ್ ಫೋನ್ 4b ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.